ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ; ಮನೆ ಮಾಡಿದ ಆತಂಕ

CKM MANGANA KAYILE
Published on

ಚಿಕ್ಕಮಗಳೂರು: ಜಿಲ್ಲೆಯ ಎನ್.ಅರ್.ಪುರ ತಾಲೂಕಿನಲ್ಲಿ 5 ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಅರೋಗ್ಯ ಇಲಾಖೆ ಸ್ಥಳೀಯರ ರಕ್ತ ಪರೀಕ್ಷೆ ನಡೆಸಿತ್ತು.

ರಕ್ತ ಪರೀಕ್ಷೆಯಲ್ಲಿ ಇನ್ನೆರಡು ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆಡೆ ಮಾಡಿಕೊಟ್ಟಿದೆ. ಎನ್.ಅರ್.ಪುರ ತಾಲೂಕಿನ ಮಡಬೂರು ಗ್ರಾಮದ ಸಮೀಪ ಕಾಫಿ ತೋಟದಲ್ಲಿನ ಸಾರ್ವಜನಿಕರಲ್ಲಿ ಪತ್ತೆಯಾಗಿದೆ.

ಮಧ್ಯಪ್ರದೇಶ ಹಾಗೂ ಅಸ್ಸಾಂ ಮೂಲದವರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎರಡು ಪ್ರಕರಣ ಸ್ಥಳೀಯರಲ್ಲಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಸ್ಥಳದಲ್ಲಿಯೇ ಆರೋಗ್ಯ ಕೇಂದ್ರ ತೆರೆಯುವಂತೆ ಸ್ಥಳೀಯರ ಅಗ್ರಹಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಅರ್.ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಇನ್ನೂ ಹೆಚ್ಚಿನ ಕ್ರಮಕೈಗೊಳ್ಳಲು ಆರೋಗ್ಯ ಇಲಾಖೆಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net