ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಗೆ ಅಮಾನತು ಶಿಕ್ಷೆ ಕೊಟ್ಟ ಬಿಜೆಪಿ

BJP 1 download
Published on

ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿದೆ.

ಸುಜಾತ ಅವರನ್ನು ಪಕ್ಷದಿಂದ ಅಮಾನತು ಮಾಡಿ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

'ಕಳೆದ ಕೆಲ ತಿಂಗಳಿಂದ ಪಕ್ಷದ ತೀರ್ಮಾನಗಳನ್ನು ಪದೇಪದೆ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಂಡಗಿಕೊಂಡು ಪಕ್ಷದ ಘನತೆಗೆ ಕುದುಂಟು ಮಾಡಿದ್ದೀರಿ. ಅಲ್ಲದೆ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಈ ಬಗ್ಗೆ ಹಲವು ಬಾರಿ ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ತಿಳಿಸಿದರೂ ಇದುವರೆಗೆ ನೀಡಿಲ್ಲ. ಆದ್ದರಿಂದ ತತ್ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ನಿಮ್ಮನ್ನು ಅಮಾನತು ಮಾಡಲಾಗಿದೆ ' ಎಂದು ನಳೀನ್​ ಕುಮಾರ್​ ಕಟೀಲ್​ ಅವರು ಆದೇಶದಲ್ಲಿ ವಿವರಿಸಿದ್ದಾರೆ.

ಒಳ ಒಪ್ಪಂದದಂತೆ ಅಧ್ಯಕ್ಷ ಪದವಿಗೆ ಸುಜಾತ ಕೃಷ್ಣಪ್ಪ ರಾಜೀನಾಮೆ ನೀಡಿರಲಿಲ್ಲ. ಬುಧವಾರ ಸ್ವಪಕ್ಷೀಯ ಸದಸ್ಯರೇ ಜಿಲ್ಲಾ ಪಂಚಾಯಿತಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಸುಜಾತ ಕೃಷ್ಣಪ್ಪರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net