ಮಕ್ಕಳ ರೋಗ ಪ್ರತಿರೋಧಕ ಶಕ್ತಿ ಹೆಚ್ಚಳಕ್ಕೆ ಯೋಜನೆ ರಾಜ್ಯಾದ್ಯಂತ ವಿಸ್ತರಣೆ

Published on

ಮಂಗಳೂರು: ಮೂರನೇ ಅಲೆ ಮಕ್ಕಳನ್ನು ಬಾಧಿಸದಂತೆ ತಡೆಯುವ ಉದ್ದೇಶದಿಂದ ಮಕ್ಕಳಿಗಾಗಿ ಅರೋಗ್ಯ ತಪಾಸಣೆ ನಡೆಸುವ 'ವಾತ್ಸಲ್ಯ' ಯೋಜನೆ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನೂತನ ಐಸಿಯು ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಿ ಅವರ ದೇಹದ ರೋಗ ಪ್ರತಿರೋಧಕ ಶಕ್ತಿ ಬಲಪಡಿಸಲು ಹಾವೇರಿ ಹಾಗೂ ಉಡುಪಿಯಲ್ಲಿ ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಅದನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದರು.
ಕಳೆದ ಬಾರಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಜನರು ಬರುತ್ತಿದ್ದ ಕಾರಣ ಎರಡನೇ ಅಲೆ ಎದುರಿಸುವಂತಾಯಿತು. ಹಾಗಾಗಿ ಈ ಬಾರಿ ಎಚ್ಚರಿಕೆ ವಹಿಸಿ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಕಟ್ಟುನಿಟ್ಟಾಗಿ ನಿರ್ಬಂಧ ಜಾರಿ ಗೊಳಿಸಲಾಗಿದೆ ಎಂದು ಸಿಎಂ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net