ಮಕ್ಕಳ ದಿನಾಚರಣೆ ನಿಮಿತ್ತ ಮಕ್ಕಳಿಗಾಗಿ ವಿವಿಧ ಸ್ಪರ್ಧೆ ನ. 20ರಂದು

je721538035802367-abc
Published on

ಹಾವೇರಿ: ಮಕ್ಕಳ ದಿನಾಚರಣೆ ಅಂಗವಾಗಿ ನ. 20ರಂದು ನಗರದ ಜಿಲ್ಲಾ ಬಾಲಭವನದಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ.
9ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಸ್ಪರ್ಧೆ, ವಾದ್ಯ ಸಂಗೀತ, ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು ಮತ್ತು ನಗಾರಿ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಚಿತ್ರಕಲೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾದ ಮಕ್ಕಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಕರೆದುಕೊಂಡು ಹೋಗಲಾಗುವುದು.
ಆಸಕ್ತ ಮಕ್ಕಳು ನ. 20ರ ಬೆಳಗ್ಗೆ 8-30ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಸ್ಪರ್ಧೆಗೆ ಬರುವ ಮಕ್ಕಳು ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net