

Donald Trump: ಯುಕ್ರೇನ್‌ನಲ್ಲಿ ನಡೆಯುತ್ತಿರುವ ರಷ್ಯಾ ಯುದ್ಧಕ್ಕೆ ಚೀನಾ ಮತ್ತು ಭಾರತ ಪ್ರಾಥಮಿಕ ಹಣದ ನೆರವನ್ನು ಒದಗಿಸುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಆರೋಪಿಸಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಭಾಷಣದಲ್ಲಿ ಟ್ರಂಪ್ ಮಂಗಳವಾರ ಈ ಹೇಳಿಕೆ ನೀಡಿದ್ದಾರೆ. "ರಷ್ಯಾದ ತೈಲವನ್ನು ಖರೀದಿಸುವುದನ್ನು ಮುಂದುವರಿಸುವ ಮೂಲಕ ಚೀನಾ ಮತ್ತು ಭಾರತ ನಡೆಯುತ್ತಿರುವ ಯುದ್ಧಕ್ಕೆ ಪ್ರಾಥಮಿಕ ಹಣಕಾಸು ಒದಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.
ರಷ್ಯಾದ ತೈಲ ಖರೀದಿಗೆ ದಂಡವಾಗಿ ಅಮೆರಿಕ ಭಾರತದ ಮೇಲೆ ಶೇ.25 ರಷ್ಟು ಹೆಚ್ಚುವರಿ ಸುಂಕ ವಿಧಿಸಿರುವ ಮಧ್ಯೆಯೇ ಟ್ರಂಪ್ ಅವರ ಇತ್ತೀಚಿನ ಆರೋಪ ಹೊರಿಸಲಾಗಿದ್ದು , ಟ್ರಂಪ್ ಆಡಳಿತವು ಭಾರತದ ಮೇಲೆ ವಿಧಿಸಿರುವ ಒಟ್ಟು ಸುಂಕವನ್ನು ಶೇ.50 ಕ್ಕೆ ಏರಿಸಿದೆ.