

ನವದೆಹಲಿ: ಜಪಾನ್ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿಯನ್ನು ಚೀನಾದ ಸಾಮಾಜಿಕ ಜಾಲತಾಣ ಕೊಂಡಾಡಿದ್ದು, ಆತನನ್ನು ಹೀರೋ ಎಂದು ಬಣ್ಣಿಸಿದೆ.
ಶಿಂಜೋ ಅವರ ಸಾವಿಗೆ ಸಂಭ್ರಮಾಚರಿಸುವ ಮೂಲಕ ಚೀನಾ ವಿಕೃತಿ ಮೆರೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್ ಮಾಡುವ ಮೂಲಕ ಅವರಿಗೆ ಸರಿಯಾಗಿಯೇ ಆಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.
ಶುಕ್ರವಾರ ಬೆಳಗ್ಗೆ ಪೂರ್ವ ಜಪಾನ್ನ ನಾರಾ ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ವ್ಯಕತಿಯೋರ್ವ ಎರಡು ಸುತ್ತಿನ ಗುಂಡು ಹಾರಿಸಿದ್ದನು. ತೀವ್ರ ಗಾಯಗೊಂಡಿದ್ದ ಶಿಂಜೋ ಅಬೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.(ಏಜೆನ್ಸೀಸ್)