ಜಿಲ್ಲೆಗೆ ಮತ್ತೊಂದು ಮಂತ್ರಿ ಸ್ಥಾನ ಬೇಕು

NAVEEN KS BJP
Published on

ಚಿತ್ರದುರ್ಗ: ಮೂರೂವರೆ ವರ್ಷದ ತನ್ನ ಅಧಿಕಾರಾವಧಿಯಲ್ಲಿ ಸಹಕಾರಿ ಕ್ಷೇತ್ರ ಹೊರತುಪಡಿಸಿ ಸಂಸತ್, ವಿಧಾನಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸಾಧನೆ ಉತ್ತಮ ಮಾಡಿದೆ. ಚಳ್ಳಕೆರೆ ವಿಧಾನಸಭೆ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ಇದ್ದರೂ ಅಭ್ಯರ್ಥಿ ಆಯ್ಕೆಯಲ್ಲಿ ಎಡವಿದ್ದರಿಂದ ಸೋತಿದ್ದೇವೆ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ್ ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಚಳ್ಳಕೆರೆಯಲ್ಲಿ 72 ಸಾವಿರ ಮತ ಬಂದಿದ್ದರೆ ವಿಧಾನಸಭೆ ಚುನಾವಣೆಯಲ್ಲಿ 30 ಸಾವಿರಕ್ಕೆ ತೃಪ್ತಿಪಟ್ಟುಕೊಳ್ಳ ಬೇಕಾಯಿತು ಎಂದು ಬೇಸರಿಸಿದರು. ಜಿಲ್ಲೆಯ ಎಲ್ಲ ಶಾಸಕರಿಗೂ ಮಂತ್ರಿ ಆಗುವ ಅರ್ಹತೆ ಇದೆ. ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ಸಿಗಬೇಕಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net