ಆಸಕ್ತಿ ವಿಷಯಗಳ ಆಯ್ಕೆ ಮುಖ್ಯ

15sgr2
ಸಾಗರದ ಎಂಡಿಎಫ್ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪಿಯು ನಂತರ ಮುಂದೇನು ಕಾರ್ಯಾಗಾರದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿವಿ ಕುಲಸಚಿವ ಡಾ. ಕೆ.ಸಿ.ಶಶಿಧರ್ ಅವರನ್ನು ಸನ್ಮಾನಿಸಲಾಯಿತು. ಎಂ.ಹರನಾಥ ರಾವ್, ಸತ್ಯನಾರಾಯಣ ಇತರರಿದ್ದರು.
Published on

ಸಾಗರ: ವಿದ್ಯಾರ್ಥಿಗಳು ಆಸಕ್ತಿ ಇರುವ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಉದ್ಯೋಗ ಅವಕಾಶ ಸೃಷ್ಟಿಸಿಕೊಳ್ಳಬೇಕು ಎಂದು ಇರುವಕ್ಕಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ.ಸಿ.ಶಶಿಧರ್ ಹೇಳಿದರು.

ನಗರದ ಎಂಡಿಎಫ್ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಆಯೋಜಿಸಿದ್ದ ಪಿಯುಸಿ ನಂತರ ಮುಂದೇನು? ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿ, ಪಿಯು ಶಿಕ್ಷಣದ ನಂತರ ಇಂದಿನ ವಿದ್ಯಾರ್ಥಿಗಳು ಸೀಮಿತ ಅವಕಾಶಗಳ ಬಗ್ಗೆ ಆಸಕ್ತಿ ವಹಿಸುತ್ತಿದ್ದಾರೆ. ಪಾಲಕರು ಸಹ ಮಕ್ಕಳಿಗೆ ಇಷ್ಟವಿರುವ ಆಸಕ್ತಿ ಕ್ಷೇತ್ರ ಆಯ್ಕೆ ಮಾಡಿಕೊಂಡು ಉದ್ಯೋಗ ಪಡೆಯಲು ಸೂಕ್ತ ಮಾರ್ಗದರ್ಶನ ನೀಡುತ್ತಿಲ್ಲ. ಮಾಹಿತಿ ಕೊರತೆ, ಮಾಹಿತಿ ಪಡೆಯುವಲ್ಲಿ ನಿರ್ಲಕ್ಷೃ ಕಂಡುಬರುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

ಪಿಯು ನಂತರ 102 ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶಗಳಿವೆ. ಅರಿವಿನ ಕೊರತೆಯಿಂದ ಉತ್ತಮ ಆಯ್ಕೆ ಮಾಡಿಕೊಳ್ಳಲಾಗದ ಸ್ಥಿತಿ ನಿರ್ಮಾಣ ಆಗುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಒಂದು ಪಠ್ಯಕ್ರಮದ ಅಭ್ಯಾಸದಿಂದ ಎಲ್ಲ ಪ್ರವೇಶ ಪರೀಕ್ಷೆಗಳನ್ನು ಎದುರಿಸಲು ಸಾಧ್ಯವಿದೆ ಎಂದರು.

ಎಂಡಿಎಫ್ ಅಧ್ಯಕ್ಷ ಎಂ.ಹರನಾಥ ರಾವ್ ಮಾತನಾಡಿ, ಶಿಕ್ಷಣ ಸಂಸ್ಥೆಗಳಲ್ಲಿ ಪಠ್ಯದ ಜತೆಗೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಬೇಕಾದ ಎಲ್ಲ ತರಬೇತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ವೃತ್ತಿ ಮಾರ್ಗದರ್ಶನ, ಪಿಯು ನಂತರ ಮುಂದಿನ ಹೆಜ್ಜೆ ಬಗ್ಗೆ ಸಹ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಜಂಟಿ ಕಾರ್ಯದರ್ಶಿ ಸತ್ಯನಾರಾಯಣ, ಪ್ರದೀಪ್ ಪ್ರಭು, ಶ್ರೀಧರ ರಾವ್, ಪ್ರಾಚಾರ್ಯ ಡಾ. ಜಗದೀಶ್ ಎಂ.ಭಂಡಾರಿ, ಜಿ.ಯೋಗೀಶ್, ವೈಶಾಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net