

ಬೆಂಗಳೂರು: ದಾಖಲೆಯ 14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ನುಡಿದಂತೆ ನಡೆದಿದ್ದೇವೆ. ಮುಂದೆಯೂ ಈಗೆ ಇರುತ್ತೇವೆ ಎಂದು ನಾಡಿನ ಜನತೆಗೆ ಭರವಸೆಯನ್ನು ನೀಡಿದ್ದಾರೆ.
ಕ್ರಿಶ್ಚಿಯನ್ ಅಭಿವೃದ್ದಿ ನಿಗಮ ಸ್ಥಾಪನೆಗೆ ರಾಜ್ಯ ಬಜೆಟ್ನಲ್ಲಿ 100 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ಭಾಷಣದ ವೇಳೆ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಇದಕ್ಕೆ ನರ್ನಾಟಕ ಕ್ರಿಶ್ವಿಯನ್ ಅಭಿವೃದ್ದಿ ನಿಗಮ ಎಂದು ಹೆಸರಿಡಲಾಗುವುದು. ಪ್ರಸಕ್ತ ಸಾಲಿನಲ್ಲಿಯೇ 100 ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಅಲ್ಪ2020ರ ರಾಜ್ಯ ವಿಧಾನಸಭೆ ಬೆಜೆಟ್ನಲ್ಲಿ ಕ್ರಿಶ್ಚಿಯನ್ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲಾಗುವುದು ಎಂದು ಹೇಳಲಾಗಿತ್ತು. ಆಧರೆ, ಕಾರಣಾಂತರಗಳಿಂದ ಆ ನಿರ್ಧಾರವನ್ನು ಕೈ ಬಿಡಲಾಗಿತ್ತು.
ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಯೋಜನೆಗೆ ಸಂಬಂಧಿಸಿದಂತೆ ಹಣಕಾಸು ನೆರವನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ. ಆಧರೆ, ನಾವು ಈ ಯೋಜನೆಯನ್ನು ಮುಂದುವರೆಸುತ್ತೇವೆ. ಇದಕ್ಕಾಗಿ ವಾರ್ಷಿಕ 60 ಕೋಟಿ ಮೀಸಲಿಡಲಾಗುವುದು. ಪ್ರಸಕ್ತ ಸಾಲಿನಿಂದ ಜಾರಿಗೆ ಬರುವಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ 10 ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತೆರೆಯಲಾಗುವುದು.
ಅಲಪಸಂಖ್ಯಾತ ಪದವಿ ಪೂರ್ವ(PUC) ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ JEE, CET, NEET ತರಭೇತಿ ನೀಡಲು ಖಾಸಗಿ ಸಂಸ್ಥೆಗಳಿಗೆ 8 ಕೋಟಿ ರೂಪಾಯಿ ಅನುದಾನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.