ರಾಜ್ಯದಲ್ಲಿ ಸಿನಿಮಾ ಮಂದಿರಗಳಿಗೆ, ಉನ್ನತ ಶಿಕ್ಷಣಕ್ಕೆ ಅವಕಾಶ; ಷರತ್ತುಗಳು ಅನ್ವಯ

bsy
Published on

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್-19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ರಾಜ್ಯದಲ್ಲಿ ಕರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಿ, ಹೊಸ ಚಟುವಟಿಕೆಗಳಿಗೆ ಅವಕಾಶ ನೀಡುವ ತೀರ್ಮಾನ ಕೈಗೊಳ್ಳಲಾಯಿತು.

ರಾಜ್ಯದಲ್ಲಿ ನೈಟ್ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರಗೆ ವಿಧಿಸಲು ತೀರ್ಮಾನಿಸಲಾಗಿದೆ. ಜೊತೆಗೆ, ಸಿನಿಮಾ ಥಿಯೇಟರ್ ಮತ್ತು ರಂಗಮಂದಿರಗಳನ್ನು 50 ಪರ್ಸೆಂಟ್​ ಸಾಮರ್ಥ್ಯ ತುಂಬಿ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಜುಲೈ 26 ರಿಂದ ಪ್ರಾರಂಭ ಮಾಡಲು ಅವಕಾಶ ನೀಡಲಾಗಿದೆ. ಒಂದು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರೆಗೆ ಮಾತ್ರ ಭೌತಿಕ ತರಗತಿಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net