

ಹೊಳೆಹೊನ್ನೂರು: ಹೊಸಕೊಪ್ಪ ಹಾಗೂ ಹೊಳೆಹೊನ್ನೂರು ನಡುವೆ ರಾಷ್ಟ್ರೀಯ ಹೆದ್ದಾರಿ-13ರ ಬೈಪಾಸ್ ರಸ್ತೆ ಸರ್ಕಲ್‌ಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಹೆಸರು ನಾಮಕರಣ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಅವರನ್ನು ಮುಂದಿನ ಪೀಳಿಗೆ ತೆಗೆದುಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅಲ್ಲದೇ ದೇಶದ ಪ್ರತಿಯೊಬ್ಬ ಪ್ರಜೆಗೂ ಅಂಬೇಡ್ಕರ್ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಬೇಕಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಮೀಸಲು ಕ್ಷೇತ್ರ. ಪರಿಶಿಷ್ಟ ವರ್ಗ ಹಾಗೂ ಪಂಗಡದ ಜನಸಂಖ್ಯೆ ಹೆಚ್ಚಾಗಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಾಗಿ ನಾವೆಲ್ಲರೂ ಸಮಾಜದ ಮುನ್ನೆಲೆಗೆ ಬರುವಂತಾಗಿದೆ. ಈ ದಿಸೆಯಲ್ಲಿ ಸರ್ಕಲ್‌ಗೆ ಅವರ ಹೆಸರಿಡಬೇಕು ಎಂದು ಡಿಎಸ್‌ಎಸ್ ತಾಲೂಕು ಸಂಚಾಲಕ ಆರ್.ಸಂದೀಪ್ ಒತ್ತಾಯಿಸಿದರು. ನಂತರ ಪೊಲೀಸ್ ಇನ್ಸ್‌ಪೆಕ್ಟರ್ ಮೂಲಕ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕೆ.ಸುರೇಶ್, ನರಸಿಂಹ, ಪಿ.ಸಿ.ರಾಜು, ಕೃಷ್ಣಪ್ಪ, ಸಂಗಮೇಶ, ರಫೀಕ್ ಅಹಮದ್, ಕೆ.ರಾಮಲಿಂಗಂ, ರಾಮಮೂರ್ತಿ, ಎನ್.ಪ್ರಸನ್ನಕುಮಾರ್, ಸುರೇಶ್ ಇತರರಿದ್ದರು.