ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಜಾಗೃತಿ ಮೂಡಿಸಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್​ ಷಾ

Amith Shah
Published on

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಹುಬ್ಬಳ್ಳಿಗೆ ವಿಶೇಷ ವಿಮಾನದಲ್ಲಿ ಬಂದಿಳಿದರು.

ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ತೆರಳಿದ ಗೃಹ ಸಚಿವ ಅಮಿತ್​ ಷಾ ಅವರಿಗೆ, ಸಿಎಂ ಯಡಿಯೂರಪ್ಪ ಸೇರಿದಂತೆ ಇತರ ಬಿಜೆಪಿ ಮುಖಂಡರು ಸಾಥ್​ ನೀಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್​ ಷಾ ಹಾಗೂ ಸಿಎಂ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಸ್ವಾಗತಿಸಿದರು.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯುವ ಬೃಹತ್​ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್​ ಷಾ ಅವರು ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net