

ಕಲಬುರಗಿ: ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಡೆದ ರ‍್ಯಾಲಿಯಲ್ಲಿ ಮಹಾನಗರ ಪಾಲಿಕೆ ವಾಹನವನ್ನು ಬಳಸಿಕೊಂಡಿರುವ ಬಗ್ಗೆ ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಮೆರವಣಿಗೆಯಲ್ಲಿ ಭಾಗಿಯಾದವರು ನೀರು ಬಾಟಲಿಯನ್ನು ರಸ್ತೆ ಬದಿ ಬೀಸಾಡುವ ಬದಲು ವಾಹನದಲ್ಲೇ ಹಾಕಲು ಅನುಕೂಲವಾಗುವಂತೆ ಮಹಾನಗರ ಪಾಲಿಕೆಯ ಕಸ ಸಾಗಿಸುವ ವಾಹನವನ್ನು ಬಳಸಿಕೊಳ್ಳಲಾಗಿತ್ತು. ಆದರೆ ಆ ಫೋಟೋಗಳನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ ಖರ್ಗೆ ಕ್ರಮವನ್ನು ಟೀಕಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಹೇಗೆ ಕಲಬುರಗಿ ಮಹಾನಗರ ಪಾಲಿಕೆ ವಾಹನವನ್ನು ಬಳಸಿಕೊಂಡರು? ಇದು ರಾಜ್ಯ ಸರ್ಕಾರ ಪ್ರಾಯೋಜಿತ ರ‍್ಯಾಲಿಯಾ? ಎಂದು ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.