

ಆನಂದಪುರ: ರಾಷ್ಟ್ರ ಮಟ್ಟದ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಬಹುಮಾನ ಪಡೆದ ಪ್ರಾರ್ಥನಾ ರಾಮಕೃಷ್ಣ ಶಾಲೆಯ ಇಬ್ಬರು ವಿದ್ಯಾರ್ಥಿಗಳನ್ನು ಬುಧವಾರ ಗ್ರಾಮಸ್ಥರು ಸನ್ಮಾನಿಸಿದರು.
ಶಾಲೆಯ ವಿದ್ಯಾರ್ಥಿಗಳಾದ ವಂದನಾ ಮತ್ತು ನಿರೀಕ್ಷಾ ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದ ಜ್ಯೂನಿಯರ್ ನ್ಯಾಷನಲ್ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದರು. ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಪ್ರಾರ್ಥನಾ ಶಾಲೆಯಿಂದ ಬಸ್ ನಿಲ್ದಾಣದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಸಾಧಕ ವಿದ್ಯಾರ್ಥಿಗಳು ಮತ್ತು ತರಬೇತಿ ನೀಡಿದ ಶಿಕ್ಷಕರಿಗೆ ನಾಗರಿಕ ಸನ್ಮಾನ ಮಾಡಲಾಯಿತು.
ಗ್ರಾಪಂ ಅಧ್ಯಕ್ಷ ಮೋಹನ್‌ಕುಮಾರ್, ಉಪಾಧ್ಯಕ್ಷೆ ರೂಪಾ, ಸದಸ್ಯ ಗುರುರಾಜ್, ಆಟೋ ಸಂಘದ ಅಧ್ಯಕ್ಷ ಗೋಪಾಲ್, ಜಿಪಂ ಮಾಜಿ ಸದಸ್ಯ ಭರ್ಮಪ್ಪ, ಗಣಪತಿ ಯಡೇಹಳ್ಳಿ, ಜನಾರ್ಧನ ತಾವರೇಹಳ್ಳಿ, ರವಿ, ಆಚಾರ್ಯ ರಾಘು, ರಾಮಕೃಷ್ಣ ಶಾಲೆ ಸಂಸ್ಥಾಪಕ ದೇವರಾಜ್ ಇತರರಿದ್ದರು.