

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ(Civil Service Recruitment: New Notification Stayed)ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದದಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸಬಾರೆಂದು ನ.25,2024 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಆದಾಗ್ಯೂ ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆ ಉಲ್ಲಂಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನ.25,2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಅಧಿಸೂಚನೆ ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದೆ.
ನ.25,2024 ರ ಸುತ್ತೋಲೆ ಉಲ್ಲಂಸುವ ಎಲ್ಲ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾ ಆಡಳಿತ ಇಲಾಖೆ ಕಾರ್ಯದರ್ಶಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದೆ.