

ನಾಪೋಕ್ಲು: ಸಮೀಪದ ಕೊಳಕೇರಿ ಗ್ರಾಮದ ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ.ತಿಮ್ಮಯ್ಯ ರಾಜ್ಯ ಮಟ್ಟದ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯ ಮಟ್ಟದ ಮಹಾ ಸಮ್ಮೇಳನ ಮತ್ತು ರಾಜ್ಯ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಸ್ವೀಕರಿಸಿದರು. ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರು ಸಲ್ಲಿಸಿದ ಶ್ಲಾಘನೀಯ ಸೇವೆಗಾಗಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಹಿಂದೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೂ ಇವರು ಭಾಜನರಾಗಿದ್ದರು. ಇವರ ಪತ್ನಿ ಕಸ್ತೂರಿ ತಿಮ್ಮಯ್ಯ ಕೂಡ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಉತ್ತಮ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.