

ಲಖನೌ: ಆಘಾತಕಾರಿ ಘಟನೆ ಒಂದರಲ್ಲಿ ಸಾಲೆಯ ಟೆರೆಸ್ನಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.
ಬೇಸಿಗೆ ರಜೆಯ ಸಮಯದಲ್ಲೂ ಆಕೆಯನ್ನು ಸುಮ್ಮನೆ ಶಾಲೆಗೆ ಕರೆಸಿಕೊಳ್ಳಲಾಗಿತ್ತು ಎಂದು ಮೃತ ಬಾಲಕಿಯ ಪೋಷಕರು ಆರೋಪಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಶಾಲಾ ಆಡಳಿತ ಮಂಡಳಿ ಸದಸ್ಯರು ಪೋಷಕರಿಗೆ ಕರೆ ಮಾಡಿ ಉಯ್ಯಾಲೆ ಆಡುತ್ತಿದ್ದ ವೇಳೆ ಕಳಗೆ ಬಿದ್ದು ನಿಮ್ಮ ಮಗಳು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ತಿಳಿಸಿದ್ದಾರೆ. ವಿಚಾರ ತಿಳಿದು ಆಸ್ಪತ್ರೆಗೆ ದೌಡಾಯಿಸಿದ ಪೋಷಕರಿಗೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಶಾಲಾ ಆಡಳಿತ ಮಂಡಳಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳ್ಲಿ ವೈರಲ್ ಆಗಿದ್ದು ಬಾಲಕಿ ಮೇಲಿಂದ ಕೆಳಗೆ ಬೀಳುತ್ತಿರುವುದು ಕಂಡು ಬಂದಿದ್ದು ಮೃತರ ಸಂಬಂಧಿಕರು ಶಾಲಾ ಆಡಳಿತ ಮಂಡಳಿಯವರು ಪೋಷಕರ ಬಳಿ ಸುಳ್ಳು ಹೇಳಿದ್ಧಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಾಲಕಿಯ ತಂದೆ ಉಯ್ಯಾಲೆಯೂ ನೆಲದಿಂದ ಸುಮಾರು ಒಂದೂವರೆ ಅಡಿ ಎತ್ತರವಿದ್ದು ಇದರಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವುದಕ್ಕೆ ಸಾಧ್ಯವಿಲ್ಲ. ಕೈ-ಕಾಲು,ಮುಖ ಹಾಗೂ ಕಣ್ಣಿನ ಭಾಗದಲ್ಲಿ ಗಾಯದ ಗುರುತುಗಳಾಗಿದ್ದು ಹಲ್ಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ.
ತಮ್ಮ ಮಗಳ ಸಾವಿನಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯ ಹಾಗೂ ಶಿಕ್ಷಕನ ಕೈವಾಡ ಇರುವ ಕುರಿತು ಬಾಲಕಿ ತಂದೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿಲು ಶಾಲಾ ಆಡಳಿತ ಮಂಡಳಿ ನಿರಾಕರಿಸಿದೆ.