ರಾಜ್ಯದ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ: 40 ಸಾವಿರ ಸೀಟು ಲಭ್ಯ

Residential school is prone to chaos
ಕೊಲ್ಹಾರ ಪಟ್ಟಣದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
Published on

ಬೆಂಗಳೂರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ 40 ಸಾವಿರ ಸೀಟುಗಳು ಲಭ್ಯವಾಗಲಿವೆ ಎಂಬ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.

ವಸತಿ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಡಿ.31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 2024ರ ಫೆ. 18ರಂದು ಪ್ರವೇಶ ಪರೀಕ್ಷೆ ನಡೆಸಲಿದೆ.

100 ಅಂಕಗಳಿಗೆ ನಡೆಯುವ ಪ್ರವೇಶ ಪರೀಕ್ಷೆಯಲ್ಲಿ ಗಳಿಸಲಿರುವ ಮೆರಿಟ್, ಮೀಸಲಾತಿ ಮತ್ತು ಅಭ್ಯರ್ಥಿಗಳು ಪ್ರವೇಶ ಕೋರಿ ನಮೂದಿಸುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

ಅಂಕವಿಕಲ ಮಕ್ಕಳಿಗೆ 10 ಸಾವಿರ ಸೀಟು:

ವಸತಿ ಶಾಲೆಗಳಲ್ಲಿ ಒಟ್ಟು 40 ಸಾವಿರ ಸೀಟುಗಳಿದ್ದು, ಇದರಲ್ಲಿ 10 ಸಾವಿರ ಸೀಟುಗಳು ಆಶ್ರಮ ಶಾಲೆಯ ಮಕ್ಕಳು, ಅಲೆಮಾರಿ ಮತ್ತು ಅರೆ ಅಲೆಮಾರಿ, ವಿಕಲಚೇತನ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಸಫಾಯಿ ಕರ್ಮಚಾರಿ ಮತ್ತು ಪೌರ ಕಾರ್ಮಿಕರ ಮಕ್ಕಳು, ಸ್ಮಶಾನ ಸಿಬ್ಬಂದಿಯ ಮಕ್ಕಳು ಮತ್ತು ವಿಶೇಷ ದುರ್ಬಲ ವರ್ಗಗಳ ಮಕ್ಕಳಿಗೆ ಮೀಸಲಿಡಲಾಗಿದೆ.

ಈ ಪೈಕಿ ವಿಶೇಷ ದುರ್ಬಲ ವರ್ಗಗಳ ಅಡಿಯಲ್ಲಿ ದೇವದಾಸಿಯರು ಮತ್ತು ಎಚ್‌ಐವಿ ಪೀಡಿತರ ಮಕ್ಕಳು, ಅನಾಥ ಮಕ್ಕಳು, ಏಕ ಪೋಷಕರು, ವಿಧವೆಯರು, ಬಾಲಕಾರ್ಮಿಕರು, ಯೋಜನಾ ನಿರಾಶ್ರಿತರು, ಚಿಂದಿ ಆಯುವವರು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಕರೊನಾ ಸೋಂಕಿನಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿರುವ ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಂಘವು ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net