ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಮೊದಲ ಆದ್ಯತೆಯಾಗಲಿ

4Thyagarthi 1
ಹಿರೇಬಿಲಗುಂಜಿ ಗ್ರಾಪಂ ವ್ಯಾಪ್ತಿ ವೀರಾಪುರ ಗ್ರಾಮದಲ್ಲಿ ಸ್ವಚ್ಛ ಸಂಕೀರ್ಣ ಕಟ್ಟಡವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಪ್ರಶಾಂತ್, ಸುಜಾತಾ, ಕೆ.ಹೊಳಿಯಪ್ಪ ಇತರರಿದ್ದರು.
Published on

ತ್ಯಾಗರ್ತಿ: ಗ್ರಾಮೀಣ ಭಾಗದ ಸ್ವಚ್ಛತೆ ನಮ್ಮ ಮೊದಲ ಗುರಿಯಾಗಿರಬೇಕು. ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಸಮೀಪದ ಹಿರೇಬಿಲಗುಂಜಿ ಗ್ರಾಪಂ ವ್ಯಾಪ್ತಿ ವೀರಾಪುರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನೂತನವಾಗಿ ನಿರ್ಮಿಸಿದ ಸ್ವಚ್ಛ ಸಂಕೀರ್ಣ ಕಟ್ಟಡ ಉದ್ಘಾಟಿಸಿ ಮಾತನಾಡಿ, ಹಿರೇಬಿಲಗುಂಜಿ ಗ್ರಾಪಂ ವ್ಯಾಪ್ತಿ ಎಲ್ಲ ಗ್ರಾಮದ ಮನೆಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಲು 3 ಕೋಟಿ ರೂ. ಮೀಸಲಿಡಲಾಗಿದೆ. ಜೆಜೆಎಂ ಯೋಜನೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೂ ಸೌಲಭ್ಯ ತಲುಪಿಸುತ್ತಿದೆ. ಮಹಿಳೆಯರು ಉಚಿತ ಬಸ್ ಸೌಲಭ್ಯದಿಂದ ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಮಾಡುತ್ತಿದ್ದಾರೆ. ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಗ್ರಾಪಂ ಸದಸ್ಯರು ಅಭಿವೃದ್ಧಿ ದೃಷ್ಟಿಯಿಂದ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.

ವಿವಿ ವರದಿ ಫಲಶ್ರುತಿ: ಸ್ಥಳೀಯ ಸಂಸ್ಥೆ ನಿರ್ಲಕ್ಷ್ಯದಿಂದ ನಾಲ್ಕು ವರ್ಷಗಳಿಂದ ಕುಂಟಿತವಾಗಿದ್ದ ಕಾಮಗಾರಿ ಕುರಿತು ಏಪ್ರಿಲ್ ತಿಂಗಳಲ್ಲಿ ‘ಹಳ್ಳ ಹಿಡಿದ ತ್ಯಾಜ್ಯ ವಿಲೇ ಘಟಕ’ ಶೀರ್ಷಿಕೆಯಡಿ ವಿಜಯವಾಣಿ ವಿಶೇಷ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಅಧಿಕಾರಿಗಳು ತ್ಯಾಜ್ಯ ಘಟಕ ಪೂರ್ಣಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಗ್ರಾಪಂ ಅಧ್ಯಕ್ಷ ಪ್ರಶಾಂತ್ ಖಂಡೋಜಿ, ಉಪಾಧ್ಯಕ್ಷೆ ಸುಜಾತಾ ಲೋಕೇಶ್, ಬಗರ್‌ಹುಕುಂ ಸಮಿತಿ ಸದಸ್ಯ ಕೆ.ಹೊಳಿಯಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ ಲಾವಿಗ್ಗೆರೆ, ಭೂನ್ಯಾಯ ಮಂಡಳಿ ಸದಸ್ಯ ಬಿ.ಎಸ್.ವೀರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಮುಖಂಡರಾದ ಚೇತನ್‌ರಾಜ್ ಕಣ್ಣೂರು , ಶರತ್, ಸುಭಾಷ್, ಗ್ರಾಪಂ ಸದಸ್ಯರು, ತಾಪಂ ಇಒ ಶಿವಪ್ರಕಾಶ್, ಪಿಡಿಒ ಶೇಖರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net