ಸಮಸ್ಯೆ ವಿಶ್ಲೇಶಿಸಿದಾಗ ರಾಜ್ಯೋತ್ಸವಕ್ಕೆ ಅರ್ಥ ಸಿಗಲಿದೆ

02 mlr 01
Published on

ಮಾಲೂರು: ಅದ್ದೂರಿ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಕನ್ನಡ ನಾಡಿನ ಚಿಂತಕರು, ವಿಮರ್ಶಕರು, ಕವಿಗಳನ್ನು ಸಾಹಿತಿಗಳನ್ನು, ಹೋರಾಟಗಾರರನ್ನು ಆಹ್ವಾನಿಸಿ ಕನ್ನಡದ ಬಗ್ಗೆ ಮತ್ತು ರಾಜ್ಯದ ಬಗೆಗಿನ ಸಮಸ್ಯೆ ವಿಶ್ಲೇಶಿಸಿದಾಗ ರಾಜ್ಯೋತ್ಸವ ಅರ್ಥಪೂರ್ಣವಾಗುತ್ತದೆ ಎಂದು ಭುವನೇಶ್ವರಿ ಕಲಾಸಂಘದ ಅಧ್ಯಕ್ಷ ಎಂ.ವಿ.ಹನುಮಂತಯ್ಯ ಹೇಳಿದರು.

ಪಟ್ಟಣದ ಮಹಾರಾಜ ವೃತ್ತದಲ್ಲಿ ಕರವೇ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬುಧವಾರ ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ವೇದಿಕೆಯಲ್ಲಿ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿ, ಕರ್ನಾಟಕ ಜನರಿಗೆ ಆರ್ಥಿಕ, ಸಾಮಾಜಿಕವಾಗಿ ಸರ್ಕಾರ ಭದ್ರತೆ ಕೊಡಬೇಕು. ಗಡಿನಾಡು, ನೀರು, ಉದ್ಯೋಗ, ವಿದ್ಯುತ್ ಸಮಸ್ಯೆಗಳನ್ನು ಚರ್ಚೆ ಮೂಲಕ ವಿಶ್ಲೇಶಣೆ ಮಾಡಿದಾಗ ಕನ್ನಡಿಗರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯ ಎಂದರು.

ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಮಾಲೂರು ತಮಿಳುನಾಡಿನ ಗಡಿಭಾಗದಲ್ಲಿದ್ದರೂ ಸ್ಥಳೀಯ ಕನ್ನಡಪರ ಹೋರಾಟಗಾರರು, ಕಲಾವಿದರು, ಸಾಹಿತಿಗಳು, ಕನ್ನಡಪರ ಸಂಘಟನೆಯವರು ಕನ್ನಡ ನೆಲ, ಜಲ, ಭಾಷೆ ಉಳಿಸಿ ಬೆಳೆಸಲು ಶ್ರಮವಹಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಬೇಕು, ಅದಕ್ಕೆ ಬೇಕಾಗುವ ಸಹಕಾರ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಹಾಸ್ಯ ಮತ್ತು ಸಾಂಸ್ಕೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪುರಸಭೆ ಪ್ರಧಾನ ಕಾರ್ಯದರ್ಶಿ ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಮುರಳೀಧರ್, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಲತಾಬಾಯಿ ಮಾಡಿಕ್, ತಾಲೂಕು ಅಧ್ಯಕ್ಷೆ ಲಕ್ಷ್ಮೀ, ಪುರಸಭೆ ಸದಸ್ಯರಾದ ವಿಜಯಲಕ್ಷ್ಮೀ, ಇಮ್ತಿಯಾಜ್‌ಖಾನ್, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಗೋವರ್ಧನರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಜಿ.ಮಧುಸೂದನ್, ವಿಜಯನರಸಿಂಹ, ಕರವೇ ತಾಲೂಕು ಯುವ ಘಟಕ ಅಧ್ಯಕ್ಷ ಸಂತೋಷ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net