ಸೂಡಾ ಪಕ್ಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ

public road
ಸೂಡಾ ಪಕ್ಕದ ರಸ್ತೆಗೆ ಕಬ್ಬಿಣದ ತಡೆಬೇಲಿ ನಿರ್ಮಿಸಿರುವುದು.
Published on

ಶಿವಮೊಗ್ಗ: ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ)ವು ತನ್ನ ಕಚೇರಿ ಪಕ್ಕದ ಸಾರ್ವಜನಿಕ ರಸ್ತೆಗೆ ಕಬ್ಬಿಣದ ತಡೆ ಬೇಲಿ ಹಾಕಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ಸೂಡಾ ಆಯುಕ್ತರು ಮತ್ತು ಅಧಿಕಾರಿಗಳ ಕಾರು ನಿಲುಗಡೆಗೆ ತೊಂದರೆ ಆಗುತ್ತಿದೆ ಎಂಬ ಕಾರಣಕ್ಕೆ ಸಾರ್ವಜನಿಕ ರಸ್ತೆಯನ್ನೇ ಬಂದ್ ಮಾಡಲಾಗಿದೆ. ಕಳೆದ ಮೂರು ದಶಕಗಳಿಂದ ಈ ರಸ್ತೆ ಸಾರ್ವಜನಿಕರ ಬಳಕೆಯಲ್ಲಿತ್ತು. ಇದೀಗ ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ ಕ್ರಮ ಅಕ್ಷಮ್ಯ ಎಂದು ನಾಗರಿಕರು ಕಿಡಿಕಾರಿದ್ದಾರೆ.
ಇದು ಜನ ವಿರೋಧಿ ನೀತಿಯಾಗಿದೆ. ಸಕಾರಣವಿಲ್ಲದೆ ಸಾರ್ವಜನಿಕರ ವಾಹನಗಳ ಸಂಚಾರವಿದ್ದ ರಸ್ತೆಯನ್ನು ಬಂದ್ ಮಾಡಲಾಗಿದೆ. ಈ ಕುರಿತಂತೆ ಪ್ರಾಧಿಕಾರ ಆಡಳಿತ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು. ತಕ್ಷಣವೇ ಸಾರ್ವಜನಿಕ ರಸ್ತೆಗೆ ಹಾಕಿರುವ ಕಬ್ಬಿಣದ ತಡೆಗೋಡೆ ತೆಗೆಯಬೇಕು. ಸುಗಮ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜಿ.ಎಂ.ಸುರೇಶ್ ಬಾಬು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net