ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ; ವಿಫಲ ಕೊಳವೆ ಬಾವಿಗಳನ್ನು ಮುಚ್ಚಿಸಿ

5 Dwd 2 Divya Prabhu
Published on

ಧಾರವಾಡ: ಪಂಚಾಯತ ರಾಜ್ ಮತ್ತು ಕಂದಾಯ ಇಲಾಖೆಯ ಅಽಕಾರಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯ ಸಫಲ ಮತ್ತು ವಿಫಲ ಕೊಳವೆ ಬಾವಿಗಳ ಸಮೀಕ್ಷೆ ಮಾಡಿ ಪ್ರತಿ ತಿಂಗಳು ವರದಿ ಸಲ್ಲಿಸಬೇಕು. ಕೊಳವೆ ಬಾವಿ ತೋಡಿಸಿದಾಗ ನೀರು ಬಾರದಿದ್ದರೆ ಹಾಗೇ ತೆರೆದು ಬಿಡುತ್ತಾರೆ. ಇದರಿಂದ ಮಕ್ಕಳ ಜೀವಕ್ಕೆ ಅಪಾಯ. ವಿಫಲ ಕೊಳವೆ ಬಾವಿಗಳನ್ನು ಕಡ್ಡಾಯವಾಗಿ ಮುಚ್ಚಿಸುವುದು ತಹಸೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಇಒಗಳ ಕರ್ತವ್ಯ ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅರಿವು, ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಜಿಲ್ಲೆಯ ೩೭ ಗ್ರಾಮಗಳಿಗೆ ೫೮ ಖಾಸಗಿ ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಸಾರ್ವಜನಿಕರಲ್ಲಿ ನೀರಿನ ಮಿತ ಬಳಕೆ , ಸೋರಿಕೆ ತಡೆಯ ಬಗ್ಗೆ ಅರಿವು ಮೂಡಿಸಬೇಕು. ಕೆರೆಗಳ ನೀರಿನ ಸುರಕ್ಷತೆ ಮತ್ತು ಸ್ವಚ್ಛತೆ ಬಗ್ಗೆ ಅಽಕಾರಿಗಳು ಗಮನ ಹರಿಸಬೇಕು ಎಂದರು.
ಜಿಲ್ಲೆಯ ೭ ಸ್ಥಳಗಳಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ. ಜಾನುವಾರು ಪಾಲನೆ ಮತ್ತು ಸುರಕ್ಷತೆ ಬಗ್ಗೆ ತಿಳಿವಳಿಕೆ ನೀಡಬೇಕು. ಅಗತ್ಯ ಔಷಽಗಳನ್ನು ಪೂರೈಸಬೇಕು. ನೀರಾವರಿ ಸೌಲಭ್ಯವಿರುವ ರೈತರಿಗೆ ನವೆಂಬರ್‌ನಲ್ಲಿ ಮೇವು ಬೀಜಗಳ ಸುಮಾರು ೩೭ ಸಾವಿರ ಕಿಟ್ ವಿತರಿಸಲಾಗಿತ್ತು. ಸರ್ಕಾರದಿಂದ ಮತ್ತೆ ಮೇವು ಬೀಜದ ಕಿಟ್ ಬಂದಿದ್ದು, ಅಗತ್ಯವುಳ್ಳ ರೈತರಿಗೆ ವಿತರಿಸಬೇಕು ಎಂದರು.
ತಹಸೀಲ್ದಾರರು ಮತ್ತು ಪಶುಪಾಲನೆ ಅಽಕಾರಿಗಳು ಜಾನುವಾರು ಮಾರುಕಟ್ಟೆಯಲ್ಲಿ `ರೈತರೊಂದಿಗೆ ನಾವಿದ್ದೇವೆ' ಅಭಿಯಾನದ ಬಗ್ಗೆ ಪ್ರಚಾರ ಮಾಡಬೇಕು. ಆಯಾ ತಾಲೂಕಿನಲ್ಲಿ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾಽಕಾರಿ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net