ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಭಾರಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ...Heavy Rain

rain final
Published on

ಬೆಂಗಳೂರು: ( Heavy Rain )  ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಿತವಾದ ಗಾಳಿ ಬೀಸುತ್ತಿದೆ. ಏಪ್ರಿಲ್​ 3ರಿಂದ ಮಳೆಯಾವಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್ 3ರಂದು ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net