ಯೂಕ್ರೇನ್​ನಿಂದ ಆಗಮಿಸಿರುವ ಕನ್ನಡಿಗರಿಗೆ ಸರ್ಕಾರ ನೆರವು-ಸಿಎಂ ಬೊಮ್ಮಾಯಿ ಭರವಸೆ

bommai
Published on

ಬೆಂಗಳೂರು: ಯೂಕ್ರೇನ್​ನಿಂದ ಮುಂಬೈ ಅಥವಾ ದೆಹಲಿಗೆ ಶನಿವಾರ ಆಗಮಿಸಿರುವ ವಿದ್ಯಾಥಿರ್ಗಳನ್ನು ಬೆಂಗಳೂರಿಗೆ ಕರೆತಂದು ಅವರವರ ಊರುಗಳಿಗೆ ಕಳುಹಿಸಲು ಸರ್ಕಾರ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಬರುವವರಿಗೆ ಸಾರಿಗೆ ಹಾಗೂ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲು ಮುಖ್ಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು. ಯೂಕ್ರೇನ್​ನಿಂದ ಕನ್ನಡಿಗ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳುವ ಬಗ್ಗೆ ಶುಕ್ರವಾರ ಕೇಂದ್ರ ವಿದೇಶಾಂಗ ಸಚಿವ ಜಯಶಂಕರ್​ ಅವರೊಂದಿಗೆ ಮಾತನಾಡಿ ಪಟ್ಟಿಯನ್ನು ಸಹ ಕಳುಹಿಸಿಕೊಡಲಾಗಿದೆ.

ಯೂಕ್ರೇನ್​ ಪಶ್ಚಿಮ ಭಾಗದಲ್ಲಿರುವವರನ್ನು ರಸ್ತೆ ಮುಖಾಂತರ ಕರೆಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು. ಆ ಪ್ರಕಾರ ರೋಮಾನಿಯಾ ಮತ್ತಿತರ ಕಡೆಯಿಂದ ವಿದ್ಯಾಥಿರ್ಗಳು ಆಗಮಿಸುತ್ತಿದ್ದಾರೆ. ಅವರ ವಿವರಗಳನ್ನು ಪಡೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು. ಹೆಚ್ಚಿನ ವಿದ್ಯಾಥಿರ್ಗಳು ಖಾರಖೈ ಎಂಬಲ್ಲಿದ್ದಾರೆ. ಅದು ಈಶಾನ್ಯ ಭಾದಲ್ಲಿದ್ದು ಅವರಿಗೆ ಸುರತ ಸ್ಥಳದಲ್ಲಿರಲು ಸೂಚಿಸಲಾಗಿದೆ. ಅನಾವಶ್ಯಕವಾಗಿ ರಸ್ತೆಗೆ ಬರುವುದನ್ನು ತಪ್ಪಿಸಲು ತಿಳಿಸಲಾಗಿದೆ. ನಮ್ಮ ಪ್ರಧಾನಿಗಳು ರಷ್ಯಾದ ಅಧ್ಯರೊಂದಿಗೆ ಮಾತನಾಡಿದ್ದು, ಭಾರತೀಯರನ್ನು ಸ್ಥಳಾಂತರ ಮಾಡಲು ಇರುವ ವಿಮಾನಗಳಿಗೆ ಸುರತ ಮಾರ್ಗವನ್ನು ಮಾಡಿಕೊಡುವಂತೆ ಕೋರಿದ್ದಾರೆ. ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ಯುದ್ಧದ ವಾತಾವರಣ ನಿಯಂತ್ರಣಕ್ಕೆ ಬಂದ ಮೇಲೆ ಆ ಪ್ರಕ್ರಿಯೆ ಕೂಡ ಪ್ರಾರಂಭವಾಗಲಿದೆ. ಕೆಲವೇ ದಿನಗಳಲ್ಲಿ ರಸ್ತೆ ಹಾಗೂ ವಿಮಾನಗಳ ಮೂಲಕ ನಮ್ಮ ವಿದ್ಯಾಥಿರ್ಗಳನ್ನು ಕರೆತರಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಧೈರ್ಯ ಹೇಳಿದ ಸಿಎಂ

ನಾನೂ ಸಹ ಕೆಲವು ವಿದ್ಯಾಥಿರ್ಗಳೊಂದಿಗೆ ಮಾತನಾಡಿದ್ದೇನೆ. ವಿಚಾರಗಳನ್ನು ತಿಳಿಸಿ ಸಂಪಕಿರ್ಸುವ ಸಂಖ್ಯೆಗಳನ್ನು ಒದಗಿಸಲಾಗಿದೆ. ಮಾಹಿತಿಗಳನ್ನು ಪಡೆದು ಧೈರ್ಯ ಹೇಳಿದ್ದೇನೆ ಎಂದು ಸಿಎಂ ತಿಳಿಸಿದರು. ಯುದ್ಧ ನಡೆಯುತ್ತಿರುವುದರಿಂದ ಯಾವುದೇ ವ್ಯವಸ್ಥೆಗಳು ಇಲ್ಲ. ರಷ್ಯಾದವರು ಪ್ರವೇಶಿಸಿರುವ ನಗರ ಭಾಗಗಳಲ್ಲಿ ಬಹಳಷ್ಟು ಅವ್ಯವಸ್ಥೆ ಇದೆ. ಭಾರತೀಯರು ಸಹ ಅಲ್ಲಿ ಸಿಲುಕಿದ್ದಾರೆ. ಯಾವುದೇ ರೀತಿಯ ಅನಾಹುತ ಅಥವಾ ತೊಂದರೆ ಆಗಿಲ್ಲ. ಆದರೆ, ಅವರಿಗೆ ಸರಿಯಾದ ಊಟ, ಇರಲು ವ್ಯವಸ್ಥೆ ಇಲ್ಲ. ಬಹಳಷ್ಟು ಜನ ಮೆಟ್ರೋದಲ್ಲಿರುವ ಬಂಕರ್​ಗಳಲ್ಲಿ ಆಶ್ರಯ ಪಡೆದಿದ್ದಾರೆ. ಬಹಳ ಜನ ಅಲ್ಲಿ ಸೇರಿರುವುದರಿಂದ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದರು.

ಪ್ರಧಾನಿ ಮಾತುಕತೆ ಯಶಸ್ವಿ

ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ರಷ್ಯಾ ಭಾಷೆ ತಿಳಿದಿರುವ ರಾಯಭಾರಿಗಳನ್ನು ಅಲ್ಲಿಗೆ ಕಳುಹಿಸಲಾಗಿದೆ. ರಷ್ಯಾದವರ ಮೇಲುಗೈ ಇರುವುದರಿಂದ ಅವರೊಂದಿಗೆ ಮಾತನಾಡಿ ಭಾರತೀಯರನ್ನು ಸುರತವಾಗಿ ಕರೆತರಲು ಇದು ಸಹಕಾರಿಯಾಗಲಿದೆ ಎಂದರು.

ರಸ್ತೆ ಮಾರ್ಗದಲ್ಲೂ ವಾಪಸ್​

ಯೂಕ್ರೇನ್​ ಪಶ್ಚಿಮ ಭಾಗದಿಂದ ರಸ್ತೆ ಮೂಲಕ ಕರೆತರಲು ಅವಕಾಶವಿದೆ. ಅದನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಪೂರ್ವ ಭಾಗದಲ್ಲಿರುವರನ್ನು ಕರೆತರಲು ಗಮನ ಹರಿಸಲಾಗಿದೆ. ಕೆಲವು ವಿಮಾನ ನಿಲ್ದಾಣಗಳು ಯಾರ ನಿಯಂತ್ರಣದಲ್ಲಿಯೂ ಇಲ್ಲದ ಕಾರಣ ಸುರತ ಮಾರ್ಗಗಳ ಮೂಲಕ ಕರೆತರಲಾಗುತ್ತಿದೆ. ಅವರ ಪೈಕಿ ಬರುವ ಕನ್ನಡಿಗರನ್ನು ಊರು ತಲುಪಿಸುವ ಕೆಲಸ ಮಾಡಲಾಗುವುದು. ಅಲ್ಲಿನ ಸಹಾಯವಾಣಿಯೊಂದಿಗೆ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಕೇಂದ್ರ ಸರ್ಕಾರದ ಸಹಾಯವಾಣಿಯೂ ಇದೆ. ಕರ್ನಾಟಕದ ಇನ್ನೂರಕ್ಕೂ ಹೆಚ್ವು ಜನ ಸಂಪರ್ಕ ಮಾಡಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ವಿವರಿಸಿದರು.

ನರೇಂದ್ರ ಮೋದಿ ಸರ್ಕಾರ ವಿದೇಶಾಂಗ ನೀತಿಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಅಲಿಪ್ತ ರಾಷ್ಟ್ರಗಳ ಕೂಟದ ನೇತೃತ್ವ ವಹಿಸಿದ್ದ ನೆಹರೂ ಅವರ ವಿದೇಶಾಂಗ ನೀತಿಯನ್ನು ಇಂದು ಎಲ್ಲರು ನೆನಪಿಸಿಕೊಳ್ಳುತ್ತಿದ್ದಾರೆ. ದಿನಬೆಳಗಾದರೆ ಪಂಡಿತ್​ ನೆಹರೂ ಅವರ ಬಗ್ಗೆ ಮಾತನಾಡುವ ಸಂ ಪರಿವಾರದವರು, ಬಿಜೆಪಿಗೆ ಈಗ ವಾಸ್ತವ ಅರ್ಥವಾಗುತ್ತಿದೆ.

| ಬಿ.ಕೆ. ಹರಿಪ್ರಸಾದ್​, ವಿಧಾನ ಪರಿಷತ್​ ವಿರೋದ ಪಕ್ಷದ ನಾಯಕ

ವಿದ್ಯಾಭ್ಯಾಸಕ್ಕಾಗಿ ಹೋಗಿದ್ದ ವಿದ್ಯಾಥಿರ್ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈತನಕ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ ಈಗ ತುರ್ತು ಸೇವೆ ಬಳಸುವ ಮಾತಾಡುತ್ತಿದೆ. ಅವರ ಹಾಹಾಕಾರ ಹಾಗೂ ಸಂಕಷ್ಟದ ಮಾತುಗಳನ್ನು ನೋಡಿದರೆ ನಮ್ಮ ಮೈ ನಡುಗುತ್ತದೆ. ಭಾರತೀಯರನ್ನು ಕರೆತರಲು ಅಗತ್ಯ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ಕಾಪಾಡಲು, ಸಲಹೆ ಹಾಗೂ ಒತ್ತಡ ಹೇರಬೇಕು.

| ಡಿ.ಕೆ.ಸುರೇಶ್​, ಸಂಸದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net