ಶ್ರೀಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ

CM Bommai
Published on

ಬಂಕಾಪುರ: ಪ್ರತಿ ಚೈತ್ರ ಶುದ್ಧ ಪಂಚಮಿಯಂದು ಹಮ್ಮಿಕೊಳ್ಳುವ ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರದ ಬಿಸನಳ್ಳಿಯಲ್ಲಿರುವ ಕಾಶೀ ಪೀಠದ ಶ್ರೀಜಗದ್ಗುರು ಪಂಚಾಚಾರ್ಯ ಗುರುಕುಲದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಂಡಿದ್ದರು. ಇದನ್ನೂ ಓದಿ: ದ್ವೇಷ ರಾಜಕಾರಣದಿಂದ ಮುಸ್ಲಿಮರಿಗಿದ್ದ ಮೀಸಲಾತಿ ತೆಗೆದಿದ್ದಾರೆ; ಸಿದ್ದರಾಮಯ್ಯ ಆರೋಪ

ಕಾಶೀ ಪೀಠದ ನೂತನ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬಂಕಾಪುರ ಅರಳೆಲೆಮಠ, ರಾಣಿಬೆನ್ನೂರು ಹಿರೇಮಠದ ಶ್ರೀಗಳು ಹಾಗೂ ಕೇಂದ್ರ ಪ್ರಲ್ಹಾದ್ ಜೋಶಿ, ಸಚಿವ ಶಿವರಾಮ್ ಹೆಬ್ಬಾರ್ ಮತ್ತಿತರರು ಪಾಲ್ಗೊಂಡಿದ್ದರು.

ಸರ್ಕಾರಕ್ಕೆ ಅಭಿನಂದನೆ

ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಲ್ಲರಿಗೂ ಸಮಾಧಾನವಾಗುವಂತೆ ನೂತನ ಮೀಸಲಾತಿಯನ್ನು ಘೋಷಿಸಿದೆ. ವೀರಶೈವ ಲಿಂಗಾಯತ ಸಮುದಾಯಕ್ಕೆ 2ಡಿ ಮೀಸಲಾತಿ ನೀಡಿರುವ ಸರ್ಕಾರಕ್ಕೆ ಕಾಶೀ ಹಿರಿಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಅಭಿನಂದಿಸಿದ್ದಾರೆ.

ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿಯಲ್ಲಿ ಹಮ್ಮಿಕೊಂಡಿದ್ದ ಶ್ರೀಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಶ್ರೀ ಉಜ್ಜಯಿನಿ, ಶ್ರೀಶೈಲ ಜಗದ್ಗುರುಗಳು, ಜಾಲಹಳ್ಳಿ ಶ್ರೀಜಯಶಾಂತಲಿಂಗೇಶ್ವರ ಶಿವಾಚಾರ್ಯ ಸ್ವಾಮಿಗಳು ಸೇರಿದಂತೆ ಹಲವಾರು ಮಠದ ಶ್ರೀಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರು 4% ಮೀಸಲಾತಿ ಪಡೆದುಕೊಂಡಿದ್ದರು! ಪ್ರತಾಪ್ ಸಿಂಹ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net