ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

bommaiFM
Published on

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಜಿ.ಎಸ್.ಟಿ. ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ವಿಷಯಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಬೊಮ್ಮಾಯಿ ಅವರು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ ಮತ್ತಿತರ ಸಚಿವರನ್ನು ಭೇಟಿಯಾಗಿದ್ದಾರೆ. ಬಿಜೆಪಿಯ ಇತರ ವರಿಷ್ಠ ನಾಯಕರನ್ನು ಕೂಡ ಈ ಸಮಯದಲ್ಲಿ ಭೇಟಿ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net