ಕರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ಭೇಟಿ

Bommai
Published on

ಬೆಂಗಳೂರು: ಕರೊನಾ ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದಾರೆ. ಇಂದು ಮೈಸೂರಿಗೆ ತೆರಳುವ ಮುನ್ನ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಷಯ ತಿಳಿಸಿದರು.

"ಮೈಸೂರು ಭೇಟಿಯ ಸಂದರ್ಭದಲ್ಲಿ ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನ ಮಾಡಿದ್ದೇನೆ" ಎಂದು ಬೊಮ್ಮಾಯಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net