ಮತ್ತೆ ದೆಹಲಿ ಕಡೆಗೆ ಸಿಎಂ ಬಸವರಾಜ ಬೊಮ್ಮಾಯಿ!

Bommai F
Published on

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತೆ ರಾಜಧಾನಿ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ(ಸೆ.7) ಬೆಳಗ್ಗೆ 11-30 ಕ್ಕೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಸಿಎಂ, ಎರಡು ದಿನಗಳ ದೆಹಲಿ ಪ್ರವಾಸ ನಡೆಸಲಿದ್ದಾರೆ.

ಮಂಗಳವಾರ ಸಂಜೆ ದೆಹಲಿಯಲ್ಲಿ ಆಯೋಜಿಸಲ್ಪಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ಬುಧವಾರ, 8ನೇ ತಾರೀಖಿನಂದು ಕೇಂದ್ರ ಸಚಿವರನ್ನು ಮತ್ತು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲಿದ್ದು, ಬಳಿಕ ರಾತ್ರಿ ಬೆಂಗಳೂರಿಗೆ ಮರುಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಕಳೆದ ಬಾರಿ ದೆಹಲಿ ಪ್ರವಾಸದ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಭೇಟಿ ಮಾಡಲು ಆಗಿರಲಿಲ್ಲ. ಈ ಬಾರಿ ಅವರನ್ನೂ ಭೇಟಿ ಮಾಡಿ, ಉಳಿದ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಹಾಗೂ ನಿಯಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net