

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಕುಟುಂಬದವರೊಂದಿಗೆ ಗಣಪತಿಗೆ ಪೂಜೆ ಸಲ್ಲಿಸಿದ್ದಾರೆ. ಹಾಗೇ ನಾಡಿನ ಜನತೆಗೂ ಗಣೇಶ ಚತುರ್ಥಿಯ ಶುಭ ಕೋರಿದ್ದಾರೆ. ಎಲ್ಲರಿಗೂ ಗಣಪತಿ ಅನುಗ್ರಹ ಸದಾ ಇರಲಿ ಎಂದು ಹಾರೈಸಿದ್ದಾರೆ.
ಇತ್ತೀಚೆಗಷ್ಟೇ ಕರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಮೊದಲಿನಷ್ಟೇ ಲವಲವಿಕೆಯಿಂದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದೂ ಕೂಡ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಮನೆಗೆ ಆಹ್ವಾನಿಸಿ, ರಾಜ್ಯದ ಅಭಿವೃದ್ಧಿ, ಪಕ್ಷ ಸಂಘಟನೆ ಕುರಿತು ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಕೂಡ ಇದ್ದರು.
ಬಿ.ಎಸ್.ಯಡಿಯೂರಪ್ಪನವರು ಈ ಬಗ್ಗೆ ಟ್ವೀಟ್ ಮಾಡಿ, ಫೋಟೋವನ್ನೂ ಶೇರ್ ಮಾಡಿಕೊಂಡಿದ್ದಾರೆ.