ಅವರ ತಲೆ; ನೈತಿಕತೆ ಅಂತೆ ನೈತಿಕತೆ... ಯಡಿಯೂರಪ್ಪ ಗರಂ

yediyurappa
yediyurappa
Published on

ಬೆಂಗಳೂರು: ಬಜೆಟ್ ಮಂಡನೆ ವೇಳೆ ಸಭಾತ್ಯಾಗ ನಡೆಸಿದ ಕಾಂಗ್ರೆಸ್ ವಿರುದ್ಧ ಸಿಎಂ ಬಿಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ.

ದೇಶದಲ್ಲಿ ಯಾವುದಾದರೂ ವಿರೋಧ ಪಕ್ಷ ಬಜೆಟ್ ಮಂಡನೆ ವೇಳೆ ಬಾಯ್ಕಾಟ್ ಮಾಡಿರುವ ಉದಾಹರಣೆ ಇದೆಯಾ..? ನಾನು ಸಿದ್ದರಾಮಯ್ಯಗೆ ಸವಾಲು ಹಾಕ್ತೇನೆ, ಮುಂಬರುವ ಚುನಾವಣೆಯಲ್ಲಿ ನಾವು 135 ಸ್ಥಾನ ಗೆದ್ದು, ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ. ಇಲ್ಲ ಎಂದರೆ ನೀವು ನನ್ನನ್ನು ಯಡಿಯೂರಪ್ಪ ಎಂದು ಕರೀಬೇಡಿ ಎಂದು ಏರಿದ ದನಿಯಲ್ಲಿ ಹೇಳಿದರು.

ನೈತಿಕತೆ ವಿಚಾರ ಇಟ್ಟುಕೊಂಡು ಸಭಾತ್ಯಾಗ ಮಾಡುತ್ತಿರುವುದಾಗಿ ಪ್ರತಿಪಕ್ಷ ನಾಯಕರು ಹೇಳಿದ್ದಾರೆ ಎಂಬ ಪತ್ರಕರ್ತರ ಹೇಳಿಕೆಗೆ ಗರಂ ಆದ ಸಿಎಂ, ಏನು ನೈತಿಕತೆ ಅಂತ ಅವ್ರು ಪ್ರಶ್ನೆ ಮಾಡೋದು? ಅವರ ತಲೆ... ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಡಿ ತನಿಖೆ ಬಗ್ಗೆ ಕೇಳಿದ ಪ್ರಶ್ನೆಗೆ, ವಿಧಾನಸಭೆಯಲ್ಲಿ ಈ ವಿಚಾರ ಚರ್ಚೆಯಾಗಲಿ, ಪ್ರತಿಪಕ್ಷದವರು ಸಲಹೆ ಕೊಡಲಿ ತನಿಖೆಗೆ ಸಿದ್ಧ ಎಂದರು. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಏನೇನಾಗಿದೆ ಎಲ್ಲವನ್ನೂ ಅಧಿವೇಶನದಲ್ಲಿ ಬಿಚ್ಚಿಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಇದೇ ವೇಳೆ ದನಿಗೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net