

ವಿವಿಧ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆನೀಡಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ನಡೆಸಿದರು. ರೈತರ ಭವಿಷ್ಯಕ್ಕಾಗಿ ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ನಾನು ರೈತರ ಪರ ಇದ್ದೇನೆ. ರೈತ ಸಮುದಾಯಕ್ಕೆ ಧಕ್ಕೆಯಾಗಲು ಬಿಡಲ್ಲ ಎಂದ ಸಿಎಂ, ರೈತ ಮುಖಂಡರನ್ನು ಚರ್ಚೆಗೆ ಆಹ್ವಾನಿಸಿದರು.