ಬುಧವಾರ ಸಚಿವ ಸಂಪುಟ ವಿಸ್ತರಣೆ; ವರಿಷ್ಠರಿಂದ ಅನುಮತಿ

BSY
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ದೆಹಲಿ ಭೇಟಿ ಸಫಲವಾಗಿದ್ದು, ಬುಧವಾರ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ಅನುಮತಿ ನೀಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಹಲವು ದಿನಗಳಿಂದ ಸಚಿವರಾಗಲು ಕಾಯುತ್ತಿದ್ದವರಿಗೆ ಶುಕ್ರದೆಸೆ ಬಂದೊದಗಿದೆ.

ವರಿಷ್ಠರ ಭೇಟಿ ನಂತರ ಬೆಂಗಳೂರಿಗೆ ವಾಪಾಸಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್​.ಯಡಿಯೂರಪ್ಪ, 7 ಜನರು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಯಾರೆಲ್ಲ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಪಟ್ಟಿ ನೀಡುತ್ತೇನೆ ಎಂದೂ ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net