CM ಬದಲಾವಣೆ ವಿಚಾರ: ಹೈಕಮಾಂಡ್​​ನ ನಿರ್ಧಾರವೇ ಅಂತಿಮ ಎಂದ ಸಿದ್ದರಾಮಯ್ಯ

Bbau - 2025-11-03T165250.250
Published on

ಮೈಸೂರು: ಜನರು ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್​​ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನ್ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು CM ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ(ಸೆ.03) ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಬಿಹಾರಿ ಮುಖಂಡರು ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು CM ಸಿದ್ದರಾಮಯ್ಯ ತಿಳಿಸಿದರು.

ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನನಿರ್ಮೂಲನೆಯಾಗಿಲ್ಲ.ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net