

ಹಾವೇರಿ: ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಯಾಸೀರಖಾನ ಪಠಾಣ ಹಾಗೂ ಹೆಸ್ಕಾಂ ಅಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಪ್ರಮುಖರಾದ ನಸೀರ್ ಅಹ್ಮದ್, ಸಲೀಂ ಅಹ್ಮದ್, ಶ್ರೀನಿವಾಸ ಮಾನೆ, ಅನ್ವರ ಬಾಷಾ, ಸಿರಾಜ್ ಶೇಕ್ ಮತ್ತಿತರರು ಉಪಸ್ಥಿತರಿದ್ದರು.