ಸಿಎಂ ಜನತಾ ದರ್ಶನ ಜಾಹೀರಾತಿಗೆ ಸೀಮಿತ

HD Kumaraswamy (1)
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.

ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಜನರ ತೆರಿಗೆ ಹಣ ಖರ್ಚು ಮಾಡಿ ಜಾಹೀರಾತು ನೀಡುತ್ತಿದ್ದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.

ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net