

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು, ಸಿಸಿಟಿವಿ ಕ್ಯಾಮೆರಾಗಳು ಮತ್ತು ತಡೆಗೋಡೆಗಳನ್ನು ಮುರಿದಿದ್ದಾರೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪ ಮಾಡಿದ್ದಾರೆ.
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಯಕರ್ತರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಗೇಟ್‌ಗೆ ಕೇಸರಿ ಬಣ್ಣ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.
ಕಾಶ್ಮೀರಿ ಪಂಡಿತರ ಮೇಲಿನ ಹೇಳಿಕೆ ವಿರುದ್ಧ ಪ್ರತಿಭಟನೆ:
ಕಾಶ್ಮೀರಿ ಹಿಂದೂಗಳ ಬಗ್ಗೆ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಯುವ ಮುಖಂಡರು ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಈ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ, ವೈಭವ್ ಸಿಂಗ್ ಸೇರಿದಂತೆ ದೆಹಲಿ ಪ್ರದೇಶ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.