ಸಚಿವರ ಜತೆ ಸಿಎಂ ಸಭೆ

siddaramaiah
Published on

ಬೆಂಗಳೂರು: ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಕುರಿತು ಮತ್ತು ಜವಾಬ್ದಾರಿ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು, ಪಕ್ಷದಿಂದ ಆಯ್ಕೆಯಾದ ಲೋಕಸಭೆ, ರಾಜ್ಯಸಭೆ ಸದಸ್ಯರ ಸಭೆ ಕರೆದಿದ್ದಾರೆ.

ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ವಾಡ್ರಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಎಐಸಿಸಿ ಪದಾಧಿಕಾರಿಗಳು, ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರು, ಮುಂಚೂಣಿ ಘಟಕಗಳ ಪ್ರಮುಖರು ಪಾಲ್ಗೊಳ್ಳುವರು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ನಡೆದಿದ್ದು, ಈಗಾಗಲೇ ನಿಗದಿ ಮಾಡಿದ ಜವಾಬ್ದಾರಿ ಹಾಗೂ ಮುಂದಿನ ಒಂದು ವಾರದ ಜವಾಬ್ದಾರಿ ಹಂಚಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆಯುವುದು.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶುಕ್ರವಾರ ಪಕ್ಷದ ಪ್ರಮುಖರ ಜತೆ ಸಭೆ ನಡೆಸಿ, ಕಾರ್ಯಕ್ರಮದಲ್ಲಿ ನಿಗದಿ ಮಾಡಿದ ಜವಾಬ್ದಾರಿ ನಿಭಾಯಿಸುವಂತೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net