

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲನೇ ಬಾರಿಗೆ ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರನ್ನು ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ಮಾಡಿದ್ದಾರೆ.
ಇಂದು ನವದೆಹಲಿಗೆ(New Delhi) ತೆರಳಿದ ಸಿದ್ದರಾಮಯ್ಯ, ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿಎಂ ಜತೆ ಸಚಿವರಾದ ಜಮೀರ್ ಅಹಮದ್ ಖಾನ್, ಭೈರತಿ ಸುರೇಶ್ ಕೂಡ ಉಪಸ್ಥಿತರಿದ್ದರು.
ರಾಜ್ಯದಲ್ಲಿ ಎದುರಾಗಿರುವ 'ಅಕ್ಕಿ' ಗೊಂದಲದ ಬಗ್ಗೆ ಕೇಂದ್ರ ಸರ್ಕಾರದ(Central Government) ಜತೆ ಮಾತುಕತೆ ನಡೆಸಲು ನವದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ನಾವು ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಕ್ಕಿ ಕೊಡುವ ಬಗ್ಗೆ ಚರ್ಚೆ ಮಾಡುತ್ತೇವೆ. ಜುಲೈ 1ರಂದು ಅನ್ನಭಾಗ್ಯ ಯೋಜನೆ ಜಾರಿ ಮಾಡುವುದು ಅನುಮಾನ! ಸ್ವಲ್ಪ ವಿಳಂಬವಾಗಬಹುದು. ಆದ್ರೆ, ರಾಜ್ಯದ ಜನತೆಗೆ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.