ರಾಜ್ಯಪಾಲರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಸಿಎಂ

madhya
Published on

ಬೆಂಗಳೂರು: ಮಧ್ಯಪ್ರದೇಶದ ಮಾನ್ಯ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಮುಂಬೈ ಮತ್ತು ಕೊಯಮತ್ತೂರಿನಲ್ಲಿ ನಡೆದ ಯಶಸ್ವಿ ಹೂಡಿಕೆ ಅವಧಿಯ ನಂತರ, ಮೂರನೇ ಸಂವಾದಾತ್ಮಕ ಸಭೆಯು ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಇದರಲ್ಲಿ ಭಾಗವಹಿಸಲು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಬುಧವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ನಡುವೆ ರಾಜಭವನಕ್ಕೆ ಭೇಟಿ ನೀಡಿದ ಅವರು ರಾಜ್ಯಪಾಲರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಮಧ್ಯಪ್ರದೇಶದಲ್ಲಿ ಹೂಡಿಕೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಿದ್ದಾರೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಇಚ್ಛಿಸುವ ಕೈಗಾರಿಕೋದ್ಯಮಿಗಳೊಂದಿಗೆ ವಿವಿಧ ವಲಯಗಳಲ್ಲಿ ತಿಳಿವಳಿಕೆ ಒಪ್ಪಂದಗಳು ಸಹ ಈ ಭೇಟಿಯಲ್ಲಿ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net