

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಅಭಿಮಾನಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂ.ಗಳ ಪರಿಹಾರ ಹಣ ಘೋಷಿಸಿತ್ತು. ಇದೀಗ ದಿಢೀರ್ ಜಾರಿಗೆ ಬರುವಂತೆ 25 ಲಕ್ಷ ರೂ. ಹಣವನ್ನು ಪರಿಹಾರವಾಗಿ ಘೋಷಿಸಿದೆ.
ಈ ಹಿಂದೆ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.