ಸಿಎಂ ಹುದ್ದೆ ಒಪ್ಪಂದ ವಿಚಾರ.. ಮುಖ್ಯಮಂತ್ರಿ ಹೇಳಿದ್ದೇ ಅಂತಿಮ ಮರುಪ್ರಶ್ನೆ ಇಲ್ಲ: DK Shivakumar

dk (3)
Published on

ಬೆಂಗಳೂರು: ನಾನು ಸಿಎಂ ಕುರ್ಚಿ ಹಾಗೂ ಪಕ್ಷಕ್ಕೆ ಸದಾ ನಿಷ್ಠನಾಗಿರುತ್ತೇನೆ. ಮುಖ್ಯಮಂತ್ರಿಗಳು ಹೇಳಿದ ಮೇಲೆ ಅದೇ ಅಂತಿಮ. ಅದರ ಬಗ್ಗೆ ಮರುಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar) ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ(ಡಿ.04) ಸುದ್ದಿಗಾರರ ಜತೆ ಮಾತನಾಡಿದರು.

ಸಿಎಂ ಹುದ್ದೆ ವಿಚಾರವಾಗಿ ಯಾವುದೇ ಒಪ್ಪಂದವಾಗಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕೇಳಿದಾಗ, “ಮುಖ್ಯಮಂತ್ರಿಗಳು ಹೇಳಿದ ಮೇಲೆ ಯಾವುದೇ ತಕರಾರು ಇಲ್ಲ. ಅವರು ಹೇಳಿದ್ದೇ ಅಂತಿಮ. ಅವರ ಹೇಳಿಕೆ ನಂತರ ಈ ವಿಚಾರವಾಗಿ ಯಾವುದೇ ವಾದ, ಚರ್ಚೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಪ್ರಕರಣದಲ್ಲಿ ಹುರುಳಿಲ್ಲ ಎಂದು ಸಾಬೀತು

“ಯಾವುದೇ ತನಿಖೆ ನಡೆದರೂ ಅದು ಗೌಪ್ಯವಾಗಿರಬೇಕು. ಏನಾದರೂ ಸತ್ಯಾಂಶವಿದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಬೇಕು. ನ್ಯಾಯಾಲಯಕ್ಕೆ ಸಲ್ಲಿಸುವ ಬದಲು ಮಾಧ್ಯಮಗಳಿಗೆ ನೀಡುತ್ತಾರೆ ಎಂದರೆ, ಅವರು ಈ ವಿಚಾರದಲ್ಲಿ ಎಷ್ಟು ಹತಾಶರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಸಾಬೀತಾಗುತ್ತಿದೆ. ಆದರೂ ಚಿಂತೆ ಇಲ್ಲ. ನಮ್ಮ ಕರ್ತವ್ಯ, ನಮ್ಮ ಸರ್ಕಾರ ಹಾಗೂ ಪಕ್ಷ ಹೋರಾಟ ಮಾಡುತ್ತದೆ. ನಮಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇದೆ” ಎಂದು ತಿಳಿಸಿದರು.

ಒಂದು ತನಿಖಾ ಸಂಸ್ಥೆ ಮತ್ತೊಂದು ತನಿಖಾ ಸಂಸ್ಥೆ ಮೇಲೆ ಪ್ರಭಾವ ಬೀರುತ್ತಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ನನ್ನ ಮೇಲೂ ಇಡಿಯವರು ವಿಚಾರಣೆ ಮಾಡಿ, ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ಆಧರಿಸಿ ಕೋರ್ಟ್ ಏನೋ ಒಂದು ತೀರ್ಪನ್ನ ಕೊಟ್ಟಿದೆ. ಈ ಪ್ರಕರಣದಲ್ಲಿ ದುಡ್ಡು ತೆಗೆದುಕೊಳ್ಳೋದು, ಕೊಡೋದು ನಡೆದಿಲ್ಲ. ರೇಡ್ ಮಾಡಿದಾಗ ಹಣ ಸಿಕ್ಕಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಮನಿ ಎಲ್ಲಿ ಲಾಂಡರಿಂಗ್ ಆಯ್ತು? ಎಂದು ಪ್ರಶ್ನಿಸಿದರು.

ಈ ಪ್ರಕರಣ ಆಡಳಿತ ವಿಚಾರವಾಗಿದೆ. ಆಡಳಿತ ವಿಭಾಗವನ್ನ ಅವರು ವಿಚಾರಣೆ ಮಾಡಬೇಕು. ಅದನ್ನು ಬಿಟ್ಟು ತನಿಖಾ ಸಂಸ್ಥೆ ಮಾಧ್ಯಮಗಳಿಗೆ ಈ ವಿಚಾರ ಸೋರಿಕೆ ಮಾಡಿದರೆ ಹೇಗೆ? ಒಂದು ತನಿಖಾ ಸಂಸ್ಥೆ, ಮತ್ತೊಂದು ತನಿಖಾ ಸಂಸ್ಥೆಗೆ ನೀವು ಹೀಗೆ ಮಾಡಿ ಅಂತ ಹೇಳೋದನ್ನ ಹೊಸದಾಗಿ ನೋಡುತ್ತಿದ್ದೇನೆ. ನನ್ನ ಅನುಭವದಲ್ಲಿ ಇದೆನ್ನೆಲ್ಲ ಹೊಸದಾಗಿ ನೋಡುತ್ತಿದ್ದೇ. ಇದಕ್ಕೆ ಜನ ಉತ್ತರ ಕೊಡ್ತಾರೆ, ನಾವೂ ಉತ್ತರ ಕೊಡ್ತೀವಿ” ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net