ರಾಜ್ಯ ಬಜೆಟ್​ 2025-26| ವೃತ್ತಿ ತೆರಿಗೆ ಏರಿಕೆ, ಸಣ್ಣ ನೀರಾವರಿ, ಮೂಲ ಸೌಕರ್ಯ ಕ್ಷೇತ್ರಕ್ಕೆ ಭರಪೂರ ಅನುದಾನ ಘೋಷಣೆ

CM Siddaramaiah
Published on

ಬೆಂಗಳೂರು: 2025-26ನೇ ಸಾಲಿನ ಬಜೆಟ್ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸುತ್ತಿದ್ದು, ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆಯನ್ನ ಬರೆದಿದ್ದಾರೆ. ಈ ಬಾರಿ 4,09,549 ಕೋಟಿ ಗಾತ್ರದ ಬಜೆಟ್​ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದು, 1,16,000 ಕೋಟಿ ರೂಪಾಯಿ ಸಾಲ ಮಾಡುವುದಾಗಿ ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ.

ಇನ್ನೂ ಬಜೆಟ್​ನಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಗಿದ್ದು, ವೃತ್ತಿ ತೆರಿಗೆಯನ್ನು 200 ರೂ. ರಿಂದ 300 ರೂ.ಗೆ ವೃತ್ತಿ ತೆರಿಗೆ ಏರಿಕೆ ಮಾಡಲಾಗಿದೆ. ಇದಲ್ಲದೆ ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಹೊಸ ಕಾರ್ಯಕ್ರಮ ಜಾರಿ ಮಾಡಲಾಗಿದ್ದು, ಈ ಯೋಜನೆಯಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.

ಕಾಲು ನೋವಿನ ಕಾರಣ ಕುಳಿತುಕೊಂಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಭಾಷಣದಲ್ಲಿ ಗೋಪಾಲಕೃಷ್ಣ ಅಡಿಗ,  ಕುವೆಂಪು ಅವರ ಕವನ ಹೇಳುವ ಮೂಲಕ ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net