

ರಾಣೆಬೆನ್ನೂರ: ಮುಡಾ ನಿವೇಶನ ಹಂಚಿಕೆ ಪ್ರಕರಣ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಹಾಗೂ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಕೇಂದ್ರ ಸರ್ಕಾರದ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಸ್ಥಳಿಯ ಅಹಿಂದ ಸಮುದಾಯಗಳ ಒಕ್ಕೂಟದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಇಲ್ಲಿನ ಕೆಇಬಿ ವಿನಾಯಕ ದೇವಸ್ಥಾನದ ಬಳಿಯಿಂದ ಕುರಿ ಹಿಂಡಿನ ಸಮೇತ ಮೆರವಣಿಗೆ ಹೊರಟ ಪ್ರತಿಭಟನಾಕರರು ಬಸ್ನಿಲ್ದಾಣದವರೆಗೆ ಸಾಗಿಬಂದರು. ಅಲ್ಲಿ ಮಾನವ ಸರಪಳಿ ನಿಮಿರ್ಸಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.
ಅಹಿಂದ ವರ್ಗದ ಸಮುದಾಯಗಳ ಅಧ್ಯಕ್ಷ ರತ್ನಾಕರ ಕುಂದಾಪುರ ಮಾತನಾಡಿ, ನಿಷ್ಕಳಂಕ ವ್ಯಕ್ತಿತ್ವದ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರಿಗೆ ಯಾವುದೇ ವಿವೇಚನೆಯಿಲ್ಲವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಕೊಡಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳು ಯಾವುದೇ ತಪು$್ಪ ಮಾಡಿಲ್ಲ. ಹೀಗಾಗಿ ಇಡೀ ಅಹಿಂದ ವರ್ಗ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಬೆಂಬಲವಾಗಿ ನಿಂತಿದೆ. ಇದು ಅವರ ರಾಜಕಾರಣಕ್ಕೆ ಮಾದರಿಯಾಗಿದೆ. ಸಿದ್ದರಾಮಯ್ಯ ಆಡಳಿತ ವೈಖರಿ ಸಹಿಸದೆ ಈ ರೀತಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.
ಆ. 29ರಂದು ಸಿದ್ದರಾಮಯ್ಯ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಈ ಹಿಂದೆ ಇದೇ ರೀತಿ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜ ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರ್ಮಸಿಂಗ್ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು. ಆದರೆ ಈಗ ಶೋಷಿತ ಸಮುದಾಯಗಳು ಜಾಗೃತವಾಗಿದ್ದು ಸಮಾಜವಾದದ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ಪರ ಬಂಡೆಯಂತೆ ನಿಂತಿವೆ. ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ತಕ್ಕ ಪಾಠವನ್ನು ಕಲಿಸಲು ಅಹಿಂದ ಸಮುದಾಯಗಳು ನಿರ್ಧರಿಸಿವೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದರು.
ಕೂಡಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ವಾಪಸ್ ಪಡೆಯಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ತೀವ್ರ ತರನಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ಸ್ಥಳಕ್ಕೆ ಬಂದ ತಹಸೀಲ್ದಾರ ಆರ್.ಎಚ್. ಭಾಗವಾನ್ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.
ಪ್ರಮುಖರಾದ ಕೃಷ್ಣಮೂತಿರ್ ಸುಣಗಾರ, ಪುಟ್ಟಪ್ಪ ಮರಿಯಮ್ಮನವರ, ಸಿದ್ದಣ್ಣ ಅಂಬಲಿ, ಮರಿಯಪ್ಪ ಪೂಜಾರ, ರವಿ ಹುಲಿಗೆಮ್ಮನವರ, ಆನಂದ ದೊಡ್ಡಮನಿ, ಬಿ.ಬಿ.ನಂದ್ಯಾಲ, ಮೃತ್ಯುಂಜಯ ಗುದಿಗೇರ, ರೇಣುಕಾ ಲಮಾಣಿ, ಶೇರುಖಾನ ಕಾಬೂಲಿ, ರವೀಂದ್ರಗೌಡ ಪಾಟೀಲ, ಆನಂದ ಹುಲಬನ್ನಿ, ಷಣ್ಮುಖ ಕಂಬಳಿ, ಕಿರಣ ಗುಳೇದ, ಸುರೇಶ ಜಡಮಲಿ, ಡಾಕಪ್ಪ ಲಮಾಣಿ, ದೇವೇಂದ್ರಪ್ಪ ಕಾಟಿ, ಕೃಷ್ಣಪ್ಪ ಕಂಬಳಿ ಸೇರಿ ನೂರಾರು ಜನ ಪಾಲ್ಗೊಂಡಿದ್ದರು.