ಹಾವೇರಿ ಭೀಕರ ಅಪಘಾತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ, ಸಂತಾಪ ಸೂಚಿಸಿದ ಗಣ್ಯರು

Haveri Accident CM
Published on

ಬೆಂಗಳೂರು: ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.

ದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ ಎರಡು ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸಿಎಂ ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್​ನಲ್ಲಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವರು ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net