

ಮೈಸೂರು: ಮುಡಾ (Muda) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮೈಸೂರಿನಲ್ಲಿರುವ ಲೋಕಾಯುಕ್ತ ಎಸ್.ಪಿ. ಕಚೇರಿಯಲ್ಲಿ ವಿಚಾರಣೆಯನ್ನು ಎದುರಿಸಿದ್ದಾರೆ.
ಸುಮಾರು 3 ಗಂಟೆಗಳ ಕಾಲ ನಡೆದ ವಿಚಾರಣೆ ಎದುರಿಸಿದ ಸಿಎಂ ಸಿದ್ದರಾಮಯ್ಯ ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದ್ಧೇನೆ. ಮತ್ತೊಮ್ಮೆ ವಿಚಾರಣೆಗೆ ಬರುವಂತೆ ಅಧಿಕಾರಿಗಳು ಸೂಚಿಸಿಲ್ಲ ಎಂದು ಹೇಳಿದ್ಧಾರೆ.
ವಿಚಾರಣೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ (Cm Siddarmaiah), ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದ್ದೇನೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ನನ್ನ ಉತ್ತರಗಳನ್ನು ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಮತ್ತೆ ವಿಚಾರಣೆಗೆ ಬರುವಂತೆ ಹೇಳಿಲ್ಲ ಎಂದು ತಿಳಿಸಿದ್ದಾರೆ.
ಪ್ರಕರಣವನ್ನು ಸಿಬಿಐಗೆ (CBI) ವಹಿಸುವಂತೆ ಬಿಜೆಪಿ ಆಗ್ರಹಿಸಿದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿಯವರು ಯಾವುದಾದರೂ ಕೇಸ್ಅನ್ನು ಸಿಬಿಐಗೆ ವಹಿಸಿದ್ದಾರಾ. ಸಿಬಿಐ ಯಾರ ಕೈಯಲ್ಲಿದೆ. ಬಿಜೆಪಿ, ಜೆಡಿಎಸ್ನವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಕಾನೂನು ಪ್ರಕಾರವೇ ಸೈಟ್ ಪಡೆದುಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Cm Siddaramaiah) ಪುನರುಚ್ಛರಿಸಿದ್ದಾರೆ.