'ಅಂಥವರು ಹೇಳಿಕೆ ನೀಡಿದರೆ ಯಾವ ಕಿಮ್ಮತ್ತು ಇರುತ್ತದೆ'?: ಸಿಎಂ ಸಿದ್ದರಾಮಯ್ಯ

Untitled design - 2024-02-25T131015.634
Published on

ಅರಸೀಕೆರೆ: ಶನಿವಾರ (ಫೆ.24) ಅರಸೀಕೆರೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆಯವರ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ ಅಷ್ಟೆ. ಯಾರಾದರೂ ವೇತನ ನೀಡಿಲ್ಲ ಎಂದು ಹೇಳಿದ್ದಾರೆಯೇ? ಅನಂತ ಕುಮಾರ ನಾವು ಅಧಿಕಾರಕ್ಕೆ ಬಂದಿರುವುದೇ ಈ ಸಂವಿಧಾನ ಬದಲಾಯಿಸಲು ಎಂದವರು ಎಂದು ಹೇಳಿದರು.

"ಅಂಥವರು ಹೇಳಿಕೆ ನೀಡಿದರೆ ಯಾವ ಕಿಮ್ಮತ್ತು ಇರುತ್ತದೆ? ಅಮೆರಿಕದ ಅಧ್ಯಕ್ಷ ಅಬ್ರಹಾಂ ಲಿಂಕನ್ ಸಂಸತ್ತು ಮತ್ತು ನ್ಯಾಯಾಲಯಗಳಿಗೆ ಜನರೇ ಮಾಲೀಕರು. ಸಂವಿಧಾನ ಕಿತ್ತೊಗೆಯಿರಿ ಎನ್ನುವವರನ್ನೇ ಕಿತ್ತೊಗೆಯಿರಿ ಎಂದು ಹೇಳಿದ್ದರು. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಲೋಕಸಭಾ ಸದಸ್ಯರಾಗಲು ಲಾಯಕ್ಕೇ?" ಎಂದರು.

"ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ. ಬಾಯಲ್ಲಿ 'ಸಬ್ ಕಾ ಸಾಥ್ ಸಬ್ ಕಾ ವಿಕಾಸ್' ಎನ್ನುತ್ತಾರೆ ಆದರೆ ಮುಸಲ್ಮಾನರನ್ನು ವಿರೋಧಿಸುತ್ತಾರೆ. ನನ್ನನ್ನು ಮುಸ್ಲಿಂ ಹೆಸರಿನ ಮೂಲಕ ಕರೆಯುವುದೇ ಅವರು ಅಲ್ಪಸಂಖ್ಯಾತರ ಧರ್ಮಕ್ಕೆ ವಿರುದ್ಧವಾಗಿರುವುದರಿಂದ" ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net