ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ: ಸಿಎಂ ಸಿದ್ದರಾಮಯ್ಯ

Untitled design - 2023-07-26T140601.351
Published on

ಬೆಂಗಳೂರು: ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಪಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

"ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ರೂ. ಇತ್ತು. ಈಗ 177 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಕೇವಲ ಒಂಬತ್ತು ವರ್ಷದಲ್ಲಿ ಇಷ್ಟೊಂದು ಸಾಲ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ" ಎಂದು ಹೇಳಿದರು.

"ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಹೆಚ್ಚಾಗಿದೆ. ಹಾಗಾಗಿ ಪೆಟ್ರೋಲಿಯಂ ಬೆಲೆ ಕೂಡ ಹೆಚ್ಚಾಗಿದೆ ಎಂದು ಜನಸಾಮಾನ್ಯರಿಗೆ ಪ್ರಧಾನಿ ಸುಳ್ಳು ಹೇಳಿದ್ದಾರೆ. ಇಂಟರ್​​ನ್ಯಾಷನಲ್​​ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ದರ ಕಡಿಮೆಯಾಗಿದೆ. ಆದ್ರೂ ದೇಶದಲ್ಲಿ ಡೀಸೆಲ್‌, ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಿಲ್ಲ" ಎಂದು ಹೇಳುವ ಮುಖೇನ ಪ್ರಧಾನಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net