ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್! ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು?

ವಿಜಯವಾಣಿ (98)
Published on

ಬೆಂಗಳೂರು: ಆಸ್ತಿ ತೆರಿಗೆ, ಮುದ್ರಾಂಕ ದರ, ನೀರು, ವಿದ್ಯುತ್ ದರ ಹೆಚ್ಚು ಮಾಡಿದ್ದಾಯ್ತು ಈಗ ಸದ್ದಿಲ್ಲದೆ ವಸತಿ ಮತ್ತು ವಾಣಿಜ್ಯ ಕಟ್ಟಡಗಳ ಎನ್ಒಸಿ ಶುಲ್ಕ ದುಬಾರಿ ಮಾಡಿದೆ ಈ ದರಿದ್ರ ಸರ್ಕಾರ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್​. ಅಶೋಕ ಗುಡುಗಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಲ್ಲ ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು? ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಎಷ್ಟು ಸಾಂಸ್ಥಿಕ ರೂಪ ಪಡೆದಿದೆ ಅಂದರೆ ಅಬಕಾರಿ ಇಲಾಖೆಯಲ್ಲಿ ಪೇದೆಯಿಂದ ಹಿಡಿದು ಉಪ ಆಯುಕ್ತ ಹುದ್ದೆವರೆಗೆ 5 ಲಕ್ಷ ರೂ.ದಿಂದ 3.5 ಕೋಟಿ ರೂ.ವರೆಗೆ ಲಂಚ ಫಿಕ್ಸ್ ಆಗಿದೆ. ಅಂದಹಾಗೆ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಹುಲ್ ಗಾಂಧಿ ಫಿಕ್ಸ್ ಮಾಡಿರುವ ರೇಟೆಷ್ಟು ಸಿಎಂ ಅವರೇ? ಎಂದು ವ್ಯಂಗ್ಯವಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net