ಯಾರು ಒತ್ತಡ ಹೇರಿದ್ರು ನಾನು ಕೇಳಲ್ಲ; SPP ಬದಲಾವಣೆ ಕುರಿತು ಖಡಕ್​ ಉತ್ತರ ನೀಡಿದ ಸಿಎಂ

Siddaramaiah
Published on

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 19 ಮಂದಿ ಆರೋಪಿಗಳು ಪೊಲೀಸರ ವಶದಲ್ಲಿದ್ದು, ವಿಚಾರಣೆ ತೀವ್ರಗೊಂಡಂತೆ ಹೊಸ ಹೆಸರು ಹಾಗೂ ವಿಚಾರಗಳು ಹೊರಬರುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಅವರ ಆಪ್ತರನ್ನು ಕೇಸ್​ನಿಂದ ಹೊರತರಲು ಪ್ರಭಾವಿಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪದ ನಡುವೆಯೇ ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರನ್ನು ಬದಲಾಯಿಸುವಂತೆ ಒತ್ತಡ ಕೇಳಿ ಬರುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ, ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್​ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net