ಬಿಜೆಪಿ ಇರುವವರೆಗೆ ಶಾಂತಿ, ನೆಮ್ಮದಿ ಇರಲ್ಲ : ಸಿಎಂ ಸಿದ್ದರಾಮಯ್ಯ

Siddaramaiah
Published on

ಬೆಂಗಳೂರು: ಬ್ರಿಟಿಷರನ್ನು ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

- ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ 

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯಸ್ಮರಣೆಯ ಅಂಗವಾಗಿ ಇಂದಿರಾ ಗಾಂಧಿ ಭವನದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಹಂಬಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ರಾಜೀವ್ ಗಾಂಧಿ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ. ಮೋದಿ ಭಯೋತ್ಪಾದನೆ ತೊಲಗಬೇಕು ಎಂದು ಹೇಳುತ್ತಾರೆ. ಮೊದಲೇ ಕಾಂಗ್ರೆಸ್ ಈ ವಿಚಾರವಾಗಿ ಹೋರಾಟ ಮಾಡಿತ್ತು. ಭಯೋತ್ಪಾದನೆಗೆ, ಖಲಿಸ್ತಾನ ಉಗ್ರರಿಗೆ ಇಂದಿರಾ ಗಾಂಧಿ ಬಲಿಯಾಗಿದ್ದಾರೆ ಎಂದಿದ್ದಾರೆ.

ಬ್ರಿಟಿಷ್ ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ. ನೆಹರು ಪ್ರಜಾಪ್ರಭುತ್ವ ಬುನಾದಿ ಹಾಕಿದ್ದಾರೆ. ಆದರೆ ನರೇಂದ್ರ ಮೋದಿ ಅಂತಹ ನಾಟಕಾರ ಎಲ್ಲಿ ಸಿಗಲ್ಲ. ಮಾತಿಗೆ ಮಾತ್ರ ಸಭ್ ಕಾ ಸಥ್ ಎನ್ನುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು‌ ಹೋಗಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಯವರು ಯಾರು ಕೂಡ ಸ್ವತಂತ್ರ ಹೋರಾಟದಲ್ಲಿ ಸತ್ತಿಲ್ಲ. ಎಲ್ಲಿಯವರೆಗೆ ಬಿಜೆಪಿ ಇರುವವರೆಗೆ ಶಾಂತಿ,ನೆಮ್ಮದಿ ಇರಲ್ಲ. ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ ಇಡಿ ದೇಶದಲ್ಲಿ ಶಾಂತಿ ನೆಲಸಬೇಕು ಎಂದು ಬಿಜಿಪಿ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡಿಲ್ಲ ಎಂದು ನಿನ್ನೆ ಬೊಮ್ಮಾಯಿ‌ ಹೇಳಿದ್ದಾರೆ. ಮಿಸ್ಟರ್ ಬೊಮ್ಮಾಯಿ‌ ನಾವು ಗ್ಯಾರಂಟಿ ಜಾರಿ ಮಾಡುತ್ತೇವೆ. ಮುಂದಿನ ಕ್ಯಾಬಿನೆಟ್​​ನಲ್ಲಿ ಜಾರಿಗೆ ತಂದೆ ತರುತ್ತೇವೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಾವು ಬಿಜೆಪಿ ಹಗರಣ ಪ್ರಸ್ತಾಪ ಮಾಡಿದೇವು, ಹೀಗಾಗಿ ಜನರು ನಮಗೆ ಬಹುಮತ ಕೊಟ್ಟಿದ್ದಾರೆ. ಬಿಜೆಪಿ ಕಾಲದಲ್ಲಿ ಮೂರು ಸಿಎಂ ಆಗಿದ್ದರು ಇದರಿಂದ ಹೇಗೆ ಅಭಿವೃದ್ಧಿ ಸಾಧ್ಯವಾಗುತ್ತದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net